Mankutimmana Kagga by D.V. Gundappa
ಅವಿದಿತಾಖಂಡಸತ್ತ್ವದಪಾರ ಜಲಧಿಯಲಿ । ಭುವನದ ದ್ವೀಪ ಕಿಂಚಿನ್ಮಾತ್ರವಿದಿತ ॥ ಪವಿತಾಂತರಕ್ಷಿಗಾಯೆರಡುಮೊಂದೇ ವಸ್ತು । ವವಗುಂಠಿತ ಬ್ರಹ್ಮ - ಮಂಕುತಿಮ್ಮ ॥ ೧೦೦ ॥
avidita aKhanDa sattvada apAra jaladhiyali । Bhuvanada dvIpa kinchit mAtra avidita ॥ pavita antarakshige A eraDum onde vastu । vavagunTita brahma - Mankutimma ॥ 100 ॥
ಇಡೀ ಬ್ರಹ್ಮಾಂಡದಲ್ಲಿ ನಮ್ಮ ಭೂಮಿ ಬಹಳ ಸಣ್ಣದು. ಏಕೆಂದರೆ ನಮಗೆ ಕಾಣುವ ಸೂರ್ಯನ ಗಾತ್ರ ಭೂಮಿಯ ಗಾತ್ರಕ್ಕಿಂತ ೧೩ ಲಕ್ಷ ಪಟ್ಟು ದೊಡ್ಡದು. ಅಬ್ಬಾ!!! ನಮ್ಮ ಅರಿವಿಗೆ ನಿಲುಕ್ಕದ್ದು. ಹಾಗಾದರೆ ಇಡೀ ಬ್ರಹ್ಮಾಂಡಕ್ಕೆ ಹೋಲಿಸಿದರೆ ನಮ್ಮ ಭೂಮಿಯೆಷ್ಟರದ್ದು? ಈ ಭೂಮಿಯಮೇಲೂ, ಒಂದು ಪಾಲು ನೆಲ ಮತ್ತು ಮೂರು ಪಾಲು ನೀರು. ಹಾಗಾಗಿ ನಾವು ನಿಂತಿರುವ ನೆಲ ಈ ಜಗತ್ತಿನ ವ್ಯಾಪಕತ್ವಕ್ಕೆ ಹೋಲಿಸಿದರೆ ಒಂದು ಸೂಜಿ ಮೊನೆಯಷ್ಟೂ ಅಲ್ಲ. ಇದನ್ನೇ ನಮಗರಿವಿಲ್ಲದ ಮತ್ತು ಅಖಂಡವಾದ ಇಡೀ ಜಗತ್ತಿನಲ್ಲಿ ಭೂಮಿಯಪಾಲು ಕಿಂಚಿನ್ಮಾತ್ರವೆಂದರು ಮಾನ್ಯ ಗುಂಡಪ್ಪನವರು.
In a huge undivided ocean of knowledge about true essence, this world is a small island that we do not understand. For a learned (pure) eye, these both are one and the same. The supreme being is what is hidden beneath all these forms. - Mankutimma.
Video Coming Soon
Detailed video explanations by scholars and experts will be available soon.