Back to List

Kagga 107 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ಅಜ್ಞಾತವಾದುದನಭಾವವೆನೆ ನಾಸ್ತಿಕನು । ಅಜ್ಞೇಯವೆಂದದಕೆ ಕೈ ಮುಗಿಯೆ ಭಕ್ತ ॥ ಜಿಜ್ಞಾಸ್ಯವೆಂದು ಪರಿಕಿಸತೊಡಗೆ ವಿಜ್ಞಾನಿ । ಸ್ವಜ್ಞಪ್ತಿಶೋಧಿ ಮುನಿ - ಮಂಕುತಿಮ್ಮ ॥ ೧೦೭ ॥

ajNatavAdudanu abhAvavene nAstikanu । ajnEyavendu adake kai mugiye bhakta ॥ jijnAsyavendu parikisatoDage vignAni । svajnaptishOdhi muni - Mankutimma ॥ 107 ॥

Meaning in Kannada

ನಮ್ಮ ಅರಿವಿಗಿಲ್ಲದ್ದು, ಗೊತ್ತಿಲದ್ದು, ತಿಳಿಯದಿರುವುದು ಎಂದು “ನಾಸ್ತಿಕ” ದೇವರನ್ನು ನಂಬುವುದಿಲ್ಲ. ಅವನಿಗೆ ದೇವರಲ್ಲಿ ನಂಬಿಕೆ ಇಲ್ಲ. ಏಕೆಂದರೆ ಅವನಿಗೆ ಗೋಚರವಾಗುವುದಿಲ್ಲ ಮತ್ತು ಅನುಭವಕ್ಕೂ ಬರುವುದಿಲ್ಲ. ಆದರೆ ಅದರ ಅರಿವಿಲ್ಲದಿದ್ದರೂ ಅದರಲ್ಲಿ ನಂಬಿಕೆ ಇಟ್ಟಿರುವವನು ಭಕ್ತ. ಇರಲಿ ನಾನು ಇದನ್ನು ವಿಚಾರಕ್ಕೆ ಒರೆ ಹಚ್ಚಿ ನಿರ್ಣಯಿಸಬೇಕು,ಪರಿಕಿಸಿ ನೋಡಬೇಕು ಎಂದು ಹೇಳುವವನೇ ವಿಜ್ಞಾನಿ. ನಂಬಿದ್ದನ್ನು ಅಂತರ್ಯದಲ್ಲಿ ಚಿಂತನ, ಮನನ , ಧ್ಯಾನ , ತಪಸ್ಸು ಮಾಡಿ ಆ ಪರಮಾತ್ಮ ವಸ್ತುವನ್ನು ಅರಿತುಕೊಳ್ಳಲು ಪ್ರಯತ್ನಪಡುವವನೆ ಮುನಿ ಅಥವಾ ಋಷಿ ಎಂದು ಪ್ರಸ್ತಾಪಿಸುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

Meaning & Interpretation

An athiest denies the existence of anything he does not understand. A believer worships it mostly because he thinks he can not know it completely anyway. A sees it as a wonder, recognizes that he does not know its ways, tries to break it down and explain why it is so. A saint is one who turns inward seeking to know it all. - Mankutimma

Themes

DevotionWisdomLifeWar

Video Section

Video Coming Soon

Detailed video explanations by scholars and experts will be available soon.