Back to List

Kagga 113 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ಅಣುಸಂಖ್ಯೆಯೆಣಿಸುವನು ವಿಶ್ವದಲಿ ವಿಜ್ಞಾನಿ । ಗುಣಿಸುವನು ಭೂತಶಕ್ತಿಗಳನದರಿಂದೇಂ? ॥ ಗಣಿತಸಾಧ್ಯದ ಹಿಂದಗಣ್ಯದ ಮಹತ್ತತ್ತ್ವ । ವಣಗಿಹುದು ಮೂಲವದು - ಮಂಕುತಿಮ್ಮ ॥ ೧೧೩ ॥

aNusankhyeya eNisuvanu vishvadali vijnAni । guNisuvanu bhUta shaktigaLanu adarindEm? ॥ gaNitasAdhyada hinde agaNyada mahat tattvavu । aNagihudu mUlavadu - Mankutimma ॥ 113 ॥

Meaning in Kannada

ಈ ಜಗತ್ತಿನ ಅತಿ ಸೂಕ್ಷ್ಮ ಜೀವಿ ಅಣುಗಳನ್ನು ವಿಜ್ಞಾನಿ ಲೆಕ್ಕ ಹಾಕಿಬಿಡಬಹುದು. ಭೌತಿಕ ಶಕ್ತಿಯನ್ನು ಗುಣಿಸಿ ಭಾಗಿಸಿ ಲೆಕ್ಕಹಾಕಿಬಿಡಬಹುದು. ಆದರೆ ಅದರಿಂದ ಏನು ಪ್ರಯೋಜನ. ಕೇವಲ ಭೌತಿಕ ರೂಪವಷ್ಟೇ ತಿಳಿಯುವುದು. ಈ ಗಣಿತ ಶಾಸ್ತ್ರಕ್ಕೂ ಮೀರಿ ಒಂದು ಮಹತತ್ವವು ಭೌತಿಕ ಶರೀರದೊಳಗೆ ಚೈತನ್ಯ ರೂಪದಲಿ ಅಡಗಿದೆ. ಅದೇ ಮೂಲ ಎಂದು ಪ್ರಸ್ತಾಪಮಾಡುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

Meaning & Interpretation

A scientist can count the atoms in this world. But by knowing that can he know about the spirit of life in beings? Behind every facet of an object that can be measured, there is the greatness of the cosmic sprit that can not be measured or counted. That is the root of the object's existence. - Mankutimma.

Themes

Life

Video Section

Video Coming Soon

Detailed video explanations by scholars and experts will be available soon.