Mankutimmana Kagga by D.V. Gundappa
ಸೃಷ್ಟಿರೂಪಂಗಳವತಾರದೊಳ್ ಕ್ರಮಲಕ್ಷ್ಯ । ಪುಷ್ಟವಾಗಿರ್ದೊಡೇನಿಲ್ಲದೊಡದೇನು? ॥ ಶಿಷ್ಟಮಾದುದು ಸತ್ತ್ವವದನು ಸೋಕದು ರೂಪ । ದೃಷ್ಟಿ ಸತ್ತ್ವದೊಳಿರಲಿ - ಮಂಕುತಿಮ್ಮ ॥ ೧೧೪ ॥
sRuShTirUpangaLa avatAradoL kramalakShya । puShTavAgirdoDe enu illadoDe adEnu? ॥ shiShTamAdudu sattvavu adanu sOkadu rUpa । dRuShTi sattvadoLirali - Mankutimma ॥ 114 ॥
ಈ ಜಗತ್ತಿನ ಸೃಷ್ಟಿಯಲ್ಲಿ ಎಲ್ಲವೂ ಆ ಪರಮಾತ್ಮನ ಅವತಾರವೆಂದು ನಾವು ನಂಬಿದ್ದೇವೆ. ಆದರೆ ಇಡೀ ಸೃಷ್ಟಿಯಲ್ಲಿ ಒಂದು ಕ್ರಮವಿದ್ದರೆಷ್ಟು ಅಥವಾ ಇಲ್ಲದಿದ್ದರೆಷ್ಟು. ಹೊರ ರೂಪ ಶಿಷ್ಟವೋ ಅಲ್ಲವೋ ಆದರೆ ಅಂತರ್ಯದಲ್ಲಿರುವ ಆ ಪರಮಾತ್ಮ ತತ್ವವು ಹೊರರೂಪಗಳಿಗೆ ಅತೀತವಾಗಿ ವಿಕಾರಗೊಳ್ಳುವುದಿಲ್ಲ. ಹಾಗಾಗಿ ನಾವು ನಮ್ಮ ದೃಷ್ಟಿಯನ್ನು ಆ ಪರತತ್ವದಲ್ಲಿ ಕೇಂದ್ರೀಕರಿಸಬೇಕು ಎನ್ನುವುದೇ ಈ ಕಗ್ಗದ ಹೂರಣ.
We may observe some order in the forms of objects of creation is this world. The order may make sense to our hypothesis or may not. Does it matter? The cosmic spirit behind all forms and order is the only truth. That is not affected by the forms, or our impressions of the forms or our hypothesis about the forms. If one wants to understand it, he must set his eyes on the spirit and not the forms. - Mankutimma.
Video Coming Soon
Detailed video explanations by scholars and experts will be available soon.