Mankutimmana Kagga by D.V. Gundappa
ಕ್ರಮದ ನಭವಿಕೃತಿ ವಾಯ್ವಾದಿ ರೂಪಗಳಂತೆ । ಕೃಮಿ ಬೀಜದಿಂ ಮತ್ಸ್ಯ ಮೃಗ ಮನುಜರಂತೆ ॥ ಕ್ರಮ ವಿವರವೇನಿರಲಿ ಸೃಷ್ಟಿಯ ವಿಧಾನದಲಿ । ಸಮಸದದು ಸತ್ತ್ವವನು - ಮಂಕುತಿಮ್ಮ ॥ ೧೧೫ ॥
kramada nabhavikRuti vAyu Adi rUpagaLante । krimi bIjadim matsya mRuga manujarante ॥ krama vivaravEnirali sRuShTiya vidhAnadali । samasadadu sattvavanu - Mankutimma ॥ 115 ॥
ಪಂಚಭೂತಗಳಿಗೆ ಒಂದು ಕ್ರಮವಿದೆ. ಸೃಷ್ಟಿಗೆ ಒಂದು ಕ್ರಮವಿದೆ ಅದು ಬದಲಾಗುವ ಕ್ರಮ. ಹೊಸ ಹೊಸ ಆವಿಷ್ಕ್ರುತ ರೂಪಗಳಲ್ಲಿ ಅದು ಕಾಣುತ್ತಲೇ ಇರುತ್ತದೆ. ಆಕಾಶ, ಭೂಮಿ ಗಾಳಿ ನೀರು ಇವೆಲ್ಲವೂ ಅವುಗಳದೇ ಆದ ಕ್ರಮದಲ್ಲಿ ಇದ್ದರೂ, ಒಂದೇ ಕ್ರಮವಿಲ್ಲದಂತೆ ಕಾಣುವುದು. ಈ ಜಗತ್ತಿನಲ್ಲಿ ಹುಟ್ಟುವ ಕ್ರಿಮಿಗಳು, ಪ್ರಾಣಿ, ಪಕ್ಷಿ, ಜಲಚರಗಳಿಗೂ ಒಂದೊಂದು ಕ್ರಮವಿದೆ. ಆಕಾರವಿದೆ, ರೂಪಗಳಿವೆ. ಆ ರೂಪಗಳು ಕಾಲಾನುಕಾಲಕ್ಕೆ ಬದಲಾಗುತ್ತಲೇ ಇರುತ್ತವೆ. ಆದರೆ ಈ ಬದಲಾವಣೆಗಳಿಗೆ ಅತೀತವಾಗಿ ಇರುವುದೇ ಆ ಪರಮ ಚೇತನ, ಪರಮಾತ್ಮ ಶಕ್ತಿ ಅಥವಾ ಆತ್ಮವೆನ್ನುತ್ತಾರೆ ಮಾನ್ಯ ಗುಂಡಪ್ಪನವರು.
What we think is order in this creation are like clouds in the sky - limitted impressions on the infinite sky. They say a single celled bacteria gave rise to fish, land animals and finally humans in that order. This hypothesis may be very well made and explain in every detail how nature works. However, it is not equal to the cosmic spirit that can breathe life into the inanimate objects. - Mankutimma
Video Coming Soon
Detailed video explanations by scholars and experts will be available soon.