Mankutimmana Kagga by D.V. Gundappa
ಪರಮಾಣುಮಿಂ ಪ್ರಪಂಚಗಳ ಸಂಯೋಜಿಪುದು । ಮರೆಯಿಂದ ಸೃಷ್ಟಿಯಂತ್ರವ ಚಾಲಿಸುವುದು ॥ ಚರಲೀಲೆಯಲಿ ಜೀವವೆನಿಪ ಚೈತನ್ಯವದು । ಪರಸತ್ತ್ವ ಶಕ್ತಿಯಲೊ - ಮಂಕುತಿಮ್ಮ ॥ ೧೧೬ ॥
paramANumim prapanchagaLa samyOjipudu । mareyinda sRuShTi yantrava cAlisuvudu ॥ caralIleyali jIvavenipa chaitanyavadu । parasattva shaktiyalo - Mankutimma ॥ 116 ॥
ಇಡೀ ಜಗತ್ತನ್ನು ಪರಮಾಣುಗಳನ್ನು ಪೋಣಿಸುವ ಕ್ರಿಯೆಯಿಂದ ಈ ಜಗತ್ತಿನ ಎಲ್ಲವನ್ನೂ ಒಂದು ಸೂತ್ರದಲ್ಲಿ ಇರುವಂತೆ ಸೃಷ್ಟಿಸಿ, ಇದನ್ನು ನಡೆಸಲು ಒಂದು ಕ್ರಮವನ್ನು ಉಂಟುಮಾಡಿ , ಅದರ ಚಲನೆಗೆ ತಾನೇ ಕಾರಣವಾಗಿ, ಈ ಜಗತ್ತಿನ ಲೀಲಾವಿನೋದವನ್ನು ನಡೆಸುವ ಜೀವವೆಂದು ಹೆಸರು ಪಡೆದ ಅದೇ ಚೈತನ್ಯ. ಆ ಚೈತನ್ಯವೇ, ಪರಮಾತ್ಮ, ಪರಮ ಶಕ್ತಿ ಮತ್ತು ಪರ ಸತ್ವ ಎನ್ನುತ್ತಾರೆ ಮಾನ್ಯ ಡಿ ವಿ.ಜಿ ಯವರು ಈ ಕಗ್ಗದಲ್ಲಿ.
Ordering all the atoms in order to create this world (and perhaps other worlds), running this machinery of the world from background, giving life to all beings in this world - are all the works of the cosmic spirit. - Mankutimma
Video Coming Soon
Detailed video explanations by scholars and experts will be available soon.