Back to List

Kagga 117 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ಸ್ಥಾಪಿತವೆ ಜೀವ ನಿನ್ನೊಡಲಿನೊಂದಂಗದಲಿ? । ಆಪಾದಶಿರವುಮದು ತುಂಬಿರುವುದಲ್ತೆ? ॥ ವ್ಯಾಪಿಸಿಹುದಂತೊಂದು ಚೈತನ್ಯ ವಿಶ್ವದಲಿ । ಲೇಪಗೊಳ್ಳದ ಸತ್ತ್ವ - ಮಂಕುತಿಮ್ಮ ॥ ೧೧೭ ॥

sthApitave jIva ninnoDalina ondangadali? । ApAda shiravum adu tumbiruvudalte? ॥ vyApisihudu antondu chaitanya vishvadali । lEpagoLLada sattva - Mankutimma ॥ 117 ॥

Meaning in Kannada

ಆ ಜೀವವೆನ್ನುವ ಚೈತನ್ಯ ಕೇವಲ ನಿನ್ನ ಯಾವೊದೋ ಒಂದು ಅಂಗದಲ್ಲಿ ತುಂಬಿದೆ ಎಂದು ಕೊಂಡಿದ್ದೀಯಾ? ಅದು ನಿನ್ನ ಅಡಿಯಿಂದ ಮುಡಿಯವರೆಗೆ ಅಂದರೆ ಪಾದದಿಂದ ಶಿರದವರೆಗೆ, ಇಡೀ ದೇಹವನ್ನು ವ್ಯಾಪಿಸಿಕೊಂಡಿದೆ. ಹೇಗೆ ಅದು ನಮ್ಮ ದೇಹದಲ್ಲಿ ವ್ಯಾಪಕವಾಗಿದೆಯೋ ಹಾಗೆಯೇ, ಇಡೀ ವಿಶ್ವದಲ್ಲಿ ಒಂದು ಅಂಗುಲವೂ ಬಿಡದೆ ಎಲ್ಲೆಡೆ ವ್ಯಾಪಿಸಿಕೊಂಡಿದೆ. ಹಾಗೆ ವ್ಯಾಪಿಸಿಕೊಂಡಿದ್ದರೂ, ಎಲ್ಲೂ ಯಾವುದಕ್ಕೂ ಅಂಟದೆ ಇರುವುದೇ ಆ ಚೈತನ್ಯದ ಗುಣ ಎಂದು ಪ್ರಸ್ತಾಪಿಸುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

Meaning & Interpretation

Is life present in any one part of your body? Is it not filled from foot to head completely? Just like that, the cosmic spirit is present every where in this world as the life giving energy. At the same time, it is not attached to anything (or any one thing). - Mankutimma.

Themes

Life

Video Section

Video Coming Soon

Detailed video explanations by scholars and experts will be available soon.