Mankutimmana Kagga by D.V. Gundappa
ರವಿಮಾತ್ರದಿಂದಲ್ಲ ಭುವಿಮಾತ್ರದಿಂದಲ್ಲ । ಭುವನಪೋಷಣೆಯುಭಯ ಸಹಕಾರದಿಂದ ॥ ವಿವಿಧ ಶಕ್ತಿರಸಂಗಳೇಕೀಭವಿಸೆ ಜೀವ । ಅವಿತರ್ಕ್ಯ ಸೂಕ್ಷ್ಮವದು - ಮಂಕುತಿಮ್ಮ ॥ ೧೧೮ ॥
ravi mAtradindalla bhuvi mAtradindalla । bhuvana pOShaNeyu ubhaya sahakAradinda ॥ vividha shakti rasangaLu EkIbhavise jIva । avitarkya sUkShmavadu - Mankutimma ॥ 118 ॥
ಕೇವಲ ಸೂರ್ಯನಿಂದಾಗಲೀ ಅಥವಾ ಕೇವಲ ಪ್ರುತ್ವೀತತ್ವದಿಂದಾಗಲೀ ಈ ಭೂಮಿಯು ಅಸ್ತಿತ್ವದಲ್ಲಿಲ್ಲ. ಈ ಭೂಮಿಯ ಅಸ್ಥಿಸ್ತ್ವಕ್ಕೆ ಈ ಎರಡರ ಸಹಕಾರವೂ ಬೇಕು. ಅಷ್ಟೇ ಅಲ್ಲ ಇವೆರಡರ ಸಹಕಾರದಿಂದ ಈ ಭೂಮಿಯ ಮೇಲ್ಮೈಯಲ್ಲಿ ಮತ್ತು ಅಂತರ್ಯದಲ್ಲಿ ಉತ್ಪತ್ತಿಯಾಗುವ ಹಲವಾರು ಜೀವರಸಗಳ ಸಮ್ಮಿಲನದಿಂದ ಇಲ್ಲಿ ಜೀವಿಗಳ ಜೀವಿಕೆ ಸಾಧ್ಯ. ಆದರೆ ಇದು ಏಕೆ ಹೀಗೆ? ಹಾಗೆ ಯಾಕಿರಬಾರದು? ಇದು ಹೀಗೇ ಏಕಾಗುತ್ತದೆ ಹಾಗೇಕಿರಬಾರದು, ಇದು ಸರಿ, ಅದು ಸರಿಯಿಲ್ಲ ಎನ್ನುವಂತಾ ತರ್ಕ ಕುತರ್ಕಗಳಿಗೆ ಸಿಗದ ಸೂಕ್ಷ್ಮವಿಚಾರವಿದು ಎನ್ನುತ್ತಾರೆ ಮಾನ್ಯ ಗುಂಡಪ್ಪನವರು.
The source of life in this world is not only due to the Sun, not only due to the earth. If life has to sustain on this planet there has to be contribution from both of them. Various energies and matter have to come together and become "one" to make life possible. It is a subtle point that can not be settled through logic or argument. - Mankutimma
Video Coming Soon
Detailed video explanations by scholars and experts will be available soon.