Back to List

Kagga 140 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ಋತುಚಕ್ರ ತಿರುಗುವುದು, ಕಾಲನೆದೆ ಮರುಗುವುದು । ಮೃತನ ಮಣ್ಣಿಂದ ಹೊಸ ಹುಲ್ಲು ಮೊಳೆಯುವುದು ॥ ಕ್ಷಿತಿ ಗರ್ಭಧರಿಸುವಳು ಮತ್ತುದಿಸುವುದು ಜೀವ । ಸತತ ಕೃಷಿಯೋ ಪ್ರಕೃತಿ - ಮಂಕುತಿಮ್ಮ ॥ ೧೪೦ ॥

Rutuchakra tiruguvudu, kAlana ede maruguvudu । mRutana maNNinda hosa hullu moLeyuvudu ॥ kShiti garbha dharisuvaLu matte udisuvudu jIva । satata kRuShiyo prakRuti - Mankutimma ॥ 140 ॥

Meaning in Kannada

ಋತುಗಳ ಚಕ್ರ ತಿರುಗುತ್ತಲೇ ಇರುತ್ತದೆ. ಕಾಲನು ತನ್ನ ಪದಾಘಾತದಲ್ಲಿ ಮೃತರಾಗುವವರ ನೆನೆದು ಮರುಗುತ್ತಾನೆ . ಹಾಗೆ ಮೃತರಾದವರು ಮಣ್ಣಾದ ಮೇಲೆ ಆ ಭೂಮಿಯಮೇಲೆ ಮತ್ತೆ ಹೊಸ ಹುಲ್ಲು ಹುಟ್ಟುತ್ತದೆ..ಈ ಧರೆ ಮತ್ತೆ ಮತ್ತೆ ಗರ್ಭ ಧರಿಸಿ ಹೊಸ ಹೊಸ ಪಲ್ಲವಗಳಿಗೆ ಎಡೆಮಾಡಿ ಕೊಡುತ್ತಾಳೆ, ಮತ್ತೆ ಮತ್ತೆ ಹೊಸ ಜೀವ ಉದಯಿಸುವುದು. ನಿರಂತರವಾಗಿ ನಡೆಯುವ ಕೃಷಿಯೇ ಈ ಪ್ರಕೃತಿ ಎಂದು ಒಂದು ಸುಂದರ ವಿಷಯವನ್ನು ಪ್ರಸ್ತಾಪಿಸುತ್ತಾರೆ ಮಾನ್ಯ ಗುಂಡಪ್ಪನವರು.

Meaning & Interpretation

"Nothing stops when a person dies. The seasons continue to change. Time may grieve for some time. From the soil in which the dead are burried, rises the sprout of grass. Earth is pregnant again with new life. Nature is in a constant state of cultivation." - Mankutimma

Themes

LifeDeathNature

Video Section

Video Coming Soon

Detailed video explanations by scholars and experts will be available soon.