Mankutimmana Kagga by D.V. Gundappa
ಹಳೆ ಸೂರ್ಯ ಹಳೆ ಚಂದ್ರ ಹಳೆ ಭೂಮಿ ಹಳೆ ನೀರು । ಹಳೆ ಹಿಮಾಚಲ ಗಂಗೆ ಹಳೆ ವಂಶಚರಿತೆ ॥ ಹಳೆಯವಿವು ನೀನದರೊಳಾವುದನು ಕಳೆದೀಯೊ? । ಹಳದು ಹೊಸತರೊಳಿರದೆ? - ಮಂಕುತಿಮ್ಮ ॥ ೧೪೧ ॥
haLe sUrya haLe chandra haLe bhUmi haLe nIru । haLe himAchala gange haLe vamsha charite ॥ haLeyavu ivu nInu adaroLu Avudanu kaLedIyo? । haLadu hosataroLu irade? - Mankutimma ॥ 141 ॥
ನಾವು ನೋಡುವ ಸೂರ್ಯ, ಚಂದ್ರ ಈ ಭೂಮಿ ನಮ್ಮ ದೇಶದ ಹೆಮ್ಮೆಯ ಹಿಮಾಲಯ ಹಿಂದೆ ಆಗಿಹೋದ ವಂಶಗಳ ಚರಿತ್ರೆ ಎಲ್ಲವೂ ಹಳೆಯದೇ ಅಲ್ಲವೇ? ಅವರಲ್ಲಿ ನೀನು ಯಾವುದನ್ನು ತೆಗೆದು ಹಾಕಬೇಕು ಅಥವಾ ಅಳಿಸಿಹಾಕಬೇಕು ಎಂದುಕೊಂಡಿದ್ದೀಯೇ? ಹಳತು ಹೊಸತರಲ್ಲಿ ಇರಲು ಸಾಧ್ಯವಿಲ್ಲವೇ? ಎಂದು ಒಂದು ವಿಷಯವನ್ನು ಪ್ರಶ್ನಾರೂಪದಲ್ಲಿ ಪ್ರಸ್ತಾಪಿಸುತ್ತಾರೆ ಮಾನ್ಯ ಗುಂಡಪ್ಪನವರು.
"The Sun, Moon, Earth, Water, Himalayas, Ganga and the human lineage are all very very old. Can you replace any one of them just because they are old? Aren't the old not present in the new?" - Mankutimma
Video Coming Soon
Detailed video explanations by scholars and experts will be available soon.