Mankutimmana Kagga by D.V. Gundappa
ಹಳೆಯ ಭಕ್ತಿಶ್ರದ್ಧೆಯಳಿಸಿಹೋಗಿವೆ ಮಾಸಿ । ಸುಳಿದಿಲ್ಲವಾವ ಹೊಸ ದರ್ಶನದ ಹೊಳಪುಂ ॥ ಪಳಗಿದ್ದ ಮನೆ ಬಿದ್ದ ಕುಂಟ ಕುರುಡನ ತೆರದಿ । ತಳಮಳಿಸುತಿದೆ ಲೋಕ - ಮಂಕುತಿಮ್ಮ ॥ ೧೫ ॥
haLeya bhakti shraddhe aLisi hOgive mAsi । suLidu illa Ava hosa darshanada hoLapum ॥ paLagidda mane bidda kunTa kuruDana teradi । taLamaLisutide lOka - Mankutimma ॥ 15 ॥
ಈಗ್ಗೆ ಎಪ್ಪತ್ತು ವರ್ಷಗಳ ಕೆಳಗೇ ಗುಂಡಪ್ಪನವರಿಗೆ ಹೀಗೆ ಅನ್ನಿಸಿದ್ದರೆ, ಇಂದು ಅವರು ಏನನ್ನುತ್ತಿದ್ದರೋ ಏನೋ!ಇರಲಿ, ಪುರಾತನ ಕಾಲದಿಂದಲೂ ಅನೂಚಾನವಾಗಿ ಜನಗಳಲ್ಲಿ ಇದ್ದ ದೇವರಲ್ಲಿ ಭಕ್ತಿ ಮತ್ತು ಸಂಪ್ರದಾಯಗಳಲ್ಲಿ ಇದ್ದ ಶ್ರದ್ಧೆ ಈಗ ಅಳಿಸಿ ಹೋಗಿದೆ. ಇಲ್ಲಿ ಸಂಪ್ರದಾಯ ಎಂದರೆ ಹಿಂದಿನಿಂದ ಬಂದಿರುವ ನಡವಳಿಕೆ ಎಂದಷ್ಟೆ ಅರ್ಥ. ಜನರಲ್ಲಿ ಮತ್ತೆ ಈ ಭಕ್ತಿ ಮತ್ತು ಶ್ರದ್ಧೆಗಳನ್ನು ತರಲು ಯಾವ ಹೊಸ ಸಿದ್ಧಾಂತಗಳೂ ಪ್ರತಿಪಾದಿಸಲ್ಪಟ್ಟು ಪ್ರಚಾರಕ್ಕೆ ಬಂದಿಲ್ಲ. ಹಾಗಾಗಿ ಜನರೆಲ್ಲರೂ ಮೊದಲಿನಿಂದ ಬಂದದನ್ನು ಕಳೆದು ಕೊಂಡು ಹೊಸದಿಲ್ಲದೆ ಒಂದು ಅತಂತ್ರ ಸ್ಥಿತಿಯಲ್ಲಿದ್ದಾರೆ. ಯಾರ ಸಹಾಯವೂ ಇಲ್ಲದೆ ಸುಲಭವಾಗಿ ಮತ್ತು ಚೆನ್ನಾಗಿ ಓಡಾಡಲು ಅಭ್ಯಾಸವಾಗಿರುವ ಮನೆ ಕುಸಿದು ಹೋದರೆ, ಆ ಮನೆಯಲ್ಲಿ ವಾಸಿಸುವ ಕುಂಟನಿಗೋ ಕುರುಡನಿಗೋ, ಪಾಪ ತಳಮಳಿಸುವ ಮತ್ತು ಪರದಾಡುವಂತೆ ಆಗುತ್ತದಲ್ಲವೇ? ಹಾಗೆ ಆಗಿದೆ ಇಂದಿನ ಲೋಕದ ಪರಿಸ್ಥಿತಿ ಎನ್ನುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.
All the old faiths and beliefs have faded. No new bright ideas have come by. The whole world is anxious - just like a blind man with just one leg finding his home collapse - that home which he was so familiar with. - Mankutimma
Video Coming Soon
Detailed video explanations by scholars and experts will be available soon.