Mankutimmana Kagga by D.V. Gundappa
ಆವ ಬೇಳೆಯದಾವ ನೀರಿನಲಿ ಬೇಯುವುದೊ! । ಆವ ಜೀವದ ಪಾಕವಾವ ತಾಪದಿನೋ! ॥ ಆ ವಿವರವನು ಕಾಣದಾಕ್ಷೇಪಣೆಯದೇನು? । ದೈವಗುಟ್ಟದು ತಿಳಿಯೆ - ಮಂಕುತಿಮ್ಮ ॥ ೧೬೦ ॥
Ava bELeyu adAva nIrinali bEyuvudo! । Ava jIvada pAkavu Ava tApadinO! ॥ A vivaravanu kANadu AkShEpaNeyadEnu? । daivaguTTadu tiLiye - Mankutimma ॥ 160 ॥
ಯಾವ ಬೇಳೆ ಯಾವ ನೀರಿನಲಿ ಬೇಯುವುದೋ ಗೊತ್ತಿಲ್ಲವಲ್ಲ ಹಾಗೆಯೇ ಪ್ರತಿಯೊಬ್ಬರೂ ಪಕ್ವವಾಗಲು ಯಾವ ಕರ್ಮಗಳನ್ನು ಅನುಭವಿಸಿ, ಸುಟ್ಟು, ಬೆಂದು, ತೋಯ್ದು, ನೋಡು ಎಷ್ಟುದಿನ ಅನುಭವಿಸಬೇಕೋ ಯಾರಿಗೂ ಅರ್ಥವಾಗದು. ಪ್ರತಿಯೊಬ್ಬರೂ ಈ ಅನುಭವದ ಯಾವುದೋ ಸ್ಥರದಲ್ಲಿರುತ್ತಾರೆ, ಹಾಗಾಗಿ ಮತ್ತೊಬ್ಬರನ್ನು ವಿಮರ್ಶೆ ಅಥವಾ ಆಕ್ಷೇಪಣೆ ಮಾಡಬೇಡ, ಏಕೆಂದರೆ ಇದು ದೈವ ಅಥವಾ ವಿಧಿಯ ರಹಸ್ಯ, ಇದನ್ನು ಅರಿತುಕೋ ಎಂದು ಒಂದು ಆದೇಶವನ್ನು ನೀಡಿದ್ದಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.
"Which pulse will boil (bake) in which water! Whose life will blossom at the cost of whose! No one can know the relation between them in advance. But can any one complain? It is a divine secret that one can not know." - Mankutimma
Video Coming Soon
Detailed video explanations by scholars and experts will be available soon.