Back to List

Kagga 182 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ಋಣದ ಜಾಲವನಂತ, ಕರುಮಚಕ್ರವನಂತ । ಜನುಮಜನುಮದ ಕಥೆಯ ತಂತುಗಳನಂತ ॥ ಅನವರತ ನೂತನವಿದೆನಿಪ ವಿಶ್ವದ ತಂತ್ರ । ಬಿನದ ಪರಬೊಮ್ಮಂಗೆ - ಮಂಕುತಿಮ್ಮ ॥ ೧೮೨ ॥

RuNada jAlavu ananta, karuma chakravu ananta । januma janumada katheya tantugaLu ananta ॥ anavarata nUtanavidu enipa vishvada tantra । binada parabommange - Mankutimma ॥ 182 ॥

Meaning in Kannada

ಈ ಜಗತ್ತಿನೊಂದಿಗೆ ನಮ್ಮ ಋಣದ ಸಂಬಂಧ ಕೊನೆಯಿಲ್ಲದ್ದು, ನಾವು ಅದರೊಳಗೆ ಇದ್ದು, ನಮ್ಮನ್ನೂ ಸೇರಿಸಿಕೊಂಡು ಸುತ್ತುವ ಕರ್ಮದ ಚಕ್ರದ ಸುತ್ತಾಟ, ಕೊನೆಯಿಲ್ಲದ್ದು, ಒಂದು ಜನ್ಮದಿಂದ ಇನ್ನೊದು ಜನ್ಮಕ್ಕೆ ನಮ್ಮನ್ನು ಹೆಣೆದುಕೊಳ್ಳುವ ಸಂಕೋಲೆಗಳೂ ಕೊನೆಮೊದಲಿಲ್ಲದ್ದು. ಆದರೂ ಪ್ರತೀ ಬಾರಿಯೂ ನಮಗೆ ಇದು ಹೊಸದು ಎಂದು ಅನಿಸುವ ಈ ವಿಶ್ವದ ತಂತ್ರವನ್ನು ಆ ಪರಮಾತ್ಮ ತನ್ನ ವಿನೋದಕ್ಕಾಗಿಯೇ ಸೃಷ್ಟಿಸಿಕೊಂಡಂತಿದೆ, ಎಂದು ಒಂದು ವೇದಾಂತದ ಒಂದು ಸೂಕ್ಷ್ಮ ವಿಚಾರವನ್ನು ಪ್ರಸ್ತಾಪಿಸುತ್ತಾರೆ, ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

Meaning & Interpretation

"The cycle of debt is endless. The cycle of consequences of our actions are endless. The linkages from one birth to another is also endless. In spite of this, the world looks new for ever. The creator seems to relish this freshness." - Mankutimma

Themes

LifeDeath

Video Section

Video Coming Soon

Detailed video explanations by scholars and experts will be available soon.