Mankutimmana Kagga by D.V. Gundappa
ನುಡಿಗಟ್ಟಿನಾಟದಕ್ಕರಚೀಟಿಯೊಟ್ಟಿನಲಿ । ತಡಕಿ ನಾವಾಯ್ದಾಯ್ದು ನುಡಿಜೋಡಿಪಂತೆ ॥ ಬಿಡಿಜೀವ ಸಂಗಾತಿಜೀವಗಳನರಸಿ ತಾಂ । ಪಡೆದಂದು ಪೂರ್ಣವದು - ಮಂಕುತಿಮ್ಮ ॥ ೧೮೭ ॥
nuDigaTTinATada akkara chITiya oTTInali । taDaki nAvu AydAydu nuDijODipante ॥ biDijIva sangAti jIvagaLanu arasi tAm । paDedandu pUrNavadu - Mankutimma ॥ 187 ॥
“ನುಡಿಕಟ್ಟು”ಎನ್ನುವುದು ಒಂದು ಆಟ. ಸೂಕ್ತ ಅಕ್ಷರಗಳ ಜೋಡಣೆಯನ್ನು ಮಾಡುತ್ತಾ, ಪದಗಳ ವಿನ್ಯಾಸವನ್ನು ಮಾಡುವುದು. ಅದನ್ನಾಡುವುದಕ್ಕೆ ಉಪಯೋಗಿಸುವ ಅಕ್ಷರಗಳನ್ನು ಬರೆದ ಚೀಟಿಗಳನ್ನು ನಾವು ಆಯುವಂತೆ, ಜೀವನದಲ್ಲೂ ನಮಗೆ ಬೇಕಾದ ಸೂಕ್ತ ಸಂಗಾತಿ ಜೀವಗಳನ್ನಾರಿಸಿಕೊಂಡರೆ ಅಂದು ನಮ್ಮ ಜೀವನದ ವಿನ್ಯಾಸದ ಜೋಡಣೆ ಪೂರ್ಣವಾಗುವುದೆಂದು ಅಪ್ಪಣೆ ಕೊಡಿಸಿದ್ದಾರೆ ಮಾನ್ಯ ಗುಂಡಪ್ಪನವರು. ಈ ಕಗ್ಗದಲ್ಲಿ.
"In scrabble we carefully pick letters from out slate and make words. Just like that, in life search for suitable partners in our life. The day we find them, our life attains completeness." - Mankutimma
Video Coming Soon
Detailed video explanations by scholars and experts will be available soon.