Mankutimmana Kagga by D.V. Gundappa
ರಸರುಚಿಗಳನು ಕಲಿಸಿ ಪಕ್ವಾನ್ನಗಳ ಪಚಿಸಿ । ರಸನೆಯಲಿ ನೀರಿಳಿಸಿ ಬಿಸಿಯುಸಿರ ಬಿಡಿಸಿ ॥ ದಶದಿಶೆಗಳಿಂ ಮುತ್ತಿ ಬರುವ ಪ್ರಕೃತಿಗದಾರು । ವಶನಾಗದಿಹ ನರನು? - ಮಂಕುತಿಮ್ಮ ॥ ೧೮೮ ॥
rasa ruchigaLa kalasi pakvAnnagaLa pachisi । rasaneyali nIriLisi bisiyusira biDisi ॥ dasha dishegaLim mutti baruva prakRutige adAru । vashanAgadiha - Mankutimma ॥ 188 ॥
ರುಚಿರುಚಿಯಾದ ರಸಭರಿತವಾದ ಅಡುಗೆಗಳನ್ನು ಮಾಡಲು ಕಲಿಸಿ, ಇವುಗಳನ್ನು ಸವಿಯುವ ತವಕದಲಿ ನಾಲಿಗೆಯಲಿ ನೀರಿಳಿಸಿ,ಹಲವಾರು ರೀತಿಯ ಪಕ್ವಾನ್ನಗಳನ್ನು ಜೀರ್ಣಿಸಿಕೊಂಡು, ಜಿಹ್ವಾ ಚಾಪಲ್ಯವನ್ನು ತೀರಿಸಿಕೊಳ್ಳಲು ಅನುವಾಗುವಂತೆ ಮತ್ತೆ ಮತ್ತೆ ಆಸೆಪದುವಂತೆ, ಪ್ರಕೃತಿಯೇ ಹತ್ತಾರು ಕಡೆಗಳಿಂದ ನಮ್ಮನ್ನು ಸೆಳೆಯುತ್ತಿರುವಾಗ ಇದಕ್ಕೆ ವಶನಾಗದವನು ಯಾರು ಎಂದು ಕೇಳುತ್ತಾರೆ ಮಾನ್ಯ ಗುಂಡಪ್ಪನವರು.
"Is there a man who does not surrender to nature's allurement? She introduces us to various tastes, feeds us gourmet food, makes our mouth water, makes pant (at the spices), attacks our senses from ten directions." - Mankutimma
Video Coming Soon
Detailed video explanations by scholars and experts will be available soon.