Back to List

Kagga 189 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ಪರಿಪರಿಯ ರೂಪಕಾಂತಿಗಳ ಕಣ್ಣಾಗಿಸುವ । ಪರಿಪರಿಯ ಫಲಮಧುರಗಳ ರಸನೆಗುಣಿಪ ॥ ಪರಿಪರಿಯ ಕಂಠರವಗಳ ಕಿವಿಗೆ ಸೋಕಿಸುವ । ಗುರು ಸೃಷ್ಟಿ ರಸಿಕತೆಗೆ - ಮಂಕುತಿಮ್ಮ ॥ ೧೮೯ ॥

paripariya rUpakAntigaLa kaNNAgisuva । paripariya phala madhuragaLa rasaneguNipa ॥ paripariya kanTharavagaLa kivige sOkisuva । guru sRuShTi rasikatege - Mankutimma ॥ 189 ॥

Meaning in Kannada

ಪರಿ ಪರಿಯಾದ ರೂಪ ಕಾಂತಿಗಳು, ಹೂಗಳು ಹಣ್ಣುಗಳು ತಿಂಡಿ ತಿನಿಸುಗಳು, ಪರಿಪರಿಯಾದ ಮಧುರ ನಾದಗಳು ಇವುಗಳನ್ನೆಲ್ಲ ಸೃಷ್ಟಿಸಿ ನಮ್ಮ ಮನಸ್ಸಿಗೆ ಆನಂದವೀಯುವ ಈ ಪ್ರಕೃತಿಯೇ, ಸೃಷ್ಟಿಯೇ ನಮ್ಮ ರಸಿಕತೆಗೆ ಗುರು ಎಂದು ಪ್ರಸ್ತಾಪಮಾಡುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

Meaning & Interpretation

"Nature is the teacher for all the indulgence we do. It puts beautiful creations in front of our eyes. It gives sweet fruits to please our tastebuds. It makes wonderful notes fall on our ears." - Mankutimma

Themes

Nature

Video Section

Video Coming Soon

Detailed video explanations by scholars and experts will be available soon.