Back to List

Kagga 190 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ಅಮೃತಕಣವಂ ಮರ್ತ್ಯಮೃದ್ಘಟದಿ ಬಯ್ತಿರಿಸಿ । ವಿಮೃಶಬುದ್ಧಿಗೆ ಮೋಹದುಪನೇತ್ರವಿಡಿಸಿ ॥ ಸಾಮ್ರಾಜ್ಯಮಧ್ಯದಲಿ ದುರ್ಭಿಕ್ಷವಾಗಿಪುದು । ಕಮ್ರತೆಯೊ ನಮ್ರತೆಯೊ? - ಮಂಕುತಿಮ್ಮ ॥ ೧೯೦ ॥

amRutakaNavam mRutya mRut ghaTadi baytirisi । vimRusha buddhige mOhada upanEtrava iDisi ॥ sAmrAjya madhyadali durbhikShavAgipudu । kamrateyo namrateyo? - Mankutimma ॥ 190 ॥

Meaning in Kannada

ನಾಶವಿಲ್ಲದ ಆತ್ಮ ಅಥವಾ ಚೇತನನನ್ನು, ನಾಶವಾಗುವಂಥಾ ಈ ದೇಹವೆಂಬ ಮಣ್ಣಿನ ಮಡಿಕೆಯಲ್ಲಿ ಬಚ್ಚಿಟ್ಟು, ವಿಮರ್ಶೆಮಾಡುವಂತಾ ಬುದ್ಧಿಶಕ್ತಿಯನ್ನೂ ಕೊಟ್ಟು ವಿವೇಚನೆಯಿಂದಲೋ ಅಥವಾ ಮೋಹದಿಂದಲೋ ತನ್ನ ಬೇಕು ಬೇಡಗಳ ವಿಮರ್ಶೆಮಾಡುತ್ತಾ ಈ ಜಗತ್ತಿಗೆ ಅಂಟಿಕೊಳ್ಳುವಂತಾ ಮನವನಿತ್ತು, ಎಲ್ಲವೂ ಇರುವಾಗ ಇದ್ದಕ್ಕಿದ್ದಂತೆಯೇ, ಏನೂ ಇಲ್ಲದಂತಾಗಿಸುವುದು, ಇದೇನು ವಿಧಾನವೋ ಅಥವಾ ಮಾನವರಿಗೆ ಒಂದು ಪ್ರಲೋಭನೆಯೋ ಎಂದು ವಿಚಾರಮಾಡುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

Meaning & Interpretation

"Nature has placed the precious drop of elixir (the soul) inside the destructible body made of earth (mud). It has put the blinders of attachment on the free thinking mind. It makes us see famine right in the midst of land of prosperity. Is nature being cunning or just humble (acting only as an instrument of the Creator)?" - Mankutimma

Themes

MoralityNature

Video Section

Video Coming Soon

Detailed video explanations by scholars and experts will be available soon.