Mankutimmana Kagga by D.V. Gundappa
ಅಂತರಂಗವನೆಲ್ಲ ಬಿಚ್ಚಿ ತೋರಿಪನಾರು? । ಅಂತರಗಭೀರಗಳ ತಾನೆ ಕಂಡವನಾರ್? ॥ ಗಂತಿಗಳು ಗಂಟುಗಳು ಮಡಿಪುಮಡಿಪುಗಳಲ್ಲಿ । ಸ್ವಂತಕೇ ದುರ್ದರ್ಶ - ಮಂಕುತಿಮ್ಮ ॥ ೧೯೪ ॥
antarangavenella bichchi tOripanAru? । antaragabhIragaLa tAne kanDavanAr? ॥ gantigaLu ganTugaLu maDipu maDipugaLalli । svantake durdasha - Mankutimma ॥ 194 ॥
ತಮ್ಮ ತಮ್ಮ ಅಂತರಂಗದಲ್ಲಿ ಏನಿದೆ ಎಂದು ತೋರುವವರು ಯಾರು ಅಥವಾ ಒಳಗಿರುವ ಗಂಭೀರತೆಯನ್ನು ಕಂಡವರಾರು, ವಿಚಾರ ಮತ್ತು ವಿಷಯಗಳು ಮನಸ್ಸಿನ ಮಡಿಕೆ ಮಡಿಕೆಗಳಲ್ಲಿ ತಿರುವು ತಿರುವುಗಳಲ್ಲಿ ಗಂಟು ಗಂಟುಗಳಾಗಿ ಸೇರಿಕೊಂಡುಬಿಟ್ಟಿದೆ. ನಮ್ಮ ಮನದಾಳದಲ್ಲಿರುವುದು ನಮ್ಮ ಅನುಭವಕ್ಕೇ ಬರುವುದು ಕಷ್ಟವಾಗಿದೆ, ಎಂದು ಪ್ರಸ್ತಾಪ ಮಾಡುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.
"Who is there who can show us our inside thoughts? Is there any one who has seen his own inner thoughts? There are many many folds, lumps and knots in one's own thoughts that are not visible easily to oneself." - Mankutimma
Video Coming Soon
Detailed video explanations by scholars and experts will be available soon.