Mankutimmana Kagga by D.V. Gundappa
ಮೊಗ ನಾಲ್ಕು ನರನಿಗಂತೆಯೆ ನಾರಿಗಂ ಬಗೆಯೆ । ಜಗಕೆ ಕಾಣಿಪುದೊಂದು, ಮನೆಯ ಜನಕೊಂದು ॥ ಸೊಗಸಿನೆಳಸಿಕೆಗೊಂದು, ತನ್ನಾತ್ಮಕಿನ್ನೊಂದು । ಬಗೆಯೆಷ್ಟೊ ಮೊಗವಷ್ಟು - ಮಂಕುತಿಮ್ಮ ॥ ೧೯೫ ॥
moga nAlku naranige anteye nArigam bageya । jagake kANipudondu, maneya janakondu ॥ sogasineLasikege ondu, tanna Atmake innodu । bageyeShTo mogavaShTu - Mankutimma ॥ 195 ॥
ನರನಿಗೆ, ನಾರಿಯನ್ನೂ ಸೇರಿ, ನಾಲ್ಕು ರೀತಿಯ ಮುಖಗಳಂತೆ. ಜಗತ್ತಿಗೆ ತೋರಲು ಒಂದು, ಮನೆಯಲ್ಲಿರುವ ಜನಗಳಿಗೆ ಒಂದು, ತನ್ನನ್ನು ತಾನಿ ನೋಡಿಕೊಳ್ಳುವುದಕ್ಕೆ ಒಂದು ಮುಖ ಮತ್ತು ಕಡೆಯದಾಗಿ ಅನ್ತಾರತ್ಮದ ಮುಖ. ಹೀಗೆ ಮನುಷ್ಯನಿಗೆ ಹಲವಾರು ಮುಖವಾಡಗಳು ಇರುತ್ತವೆ ಎಂದು ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ ಪ್ರಸ್ತಾಪಿಸುತ್ತಾರೆ.
"A man has four faces; so does a woman. Same number as the kind of relations one has. One face for the world, one for the family members, one to enjoy the pleasures of the world and one more his inner conscience." - Mankutimma
Video Coming Soon
Detailed video explanations by scholars and experts will be available soon.