Mankutimmana Kagga by D.V. Gundappa
ಮನುಜಲೋಕವಿಕಾರಗಳನು ನೀನಳಿಸುವೊಡೆ । ಮನಕೊಂದು ದರ್ಪಣವ ನಿರವಿಸೆಂತಾನುಂ ॥ ಅನುಭವಿಪರವರಂದು ತಮ್ಮಂತರಂಗಗಳ । ಅನುಪಮಾಸಹ್ಯಗಳ - ಮಂಕುತಿಮ್ಮ ॥ ೧೯೬ ॥
manuja lOka vikAragaLanu nInu aLisuvoDe । manakondu darpaNava niravisemtAnum ॥ anubhaviparu avarandu tamma antarangagaLa । anupama asahyagaLa - Mankutimma ॥ 196 ॥
ಮನುಜರ ಮನಸ್ಸುಗಳಲ್ಲಿರುವ ವಿಕಾರಗಳನ್ನು ಅಳಿಸಿಹಾಕಿ ಅವರಲ್ಲಿ ನಿರ್ಮಲ ಮನೋ ಪ್ರವೃತ್ತಿಯನ್ನು ಉಂಟು ಮಾಡಲು ಪ್ರಯತ್ನಿಸಿ, ಆ ಮನಸ್ಸು ತನ್ನನ್ನು ತಾನೇ ನೋಡಿಕೊಳ್ಳುವಂಥಾ ಒಂದು ಕನ್ನಡಿಯನ್ನು ತಯಾರಿಸಿದರೆ, ಆಗ ಅವರುಗಳು ತಮ್ಮ ತಮ್ಮ ಮನಸ್ಸಿನ ಭಾವನೆಗಳನ್ನು ನೋಡಿಕೊಂಡರೆ, ಅಂತರಂಗದಲ್ಲಿ ಹುದುಗಿರುವ ಹೋಲಿಸಲಾಗದಷ್ಟು ಅಸಹ್ಯಕರವಾದ ಭಾವನೆಗಳನ್ನು ಅನುಭವಿಸುತ್ತಾರೆ ಎನ್ನುತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.
"If one wishes to clean the world from all the imperfections, then one must start by creating a mirror for his own mind. Then he will be able to see the unique disgusting details of their own inner thoughts." - Mankutimma
Video Coming Soon
Detailed video explanations by scholars and experts will be available soon.