Mankutimmana Kagga by D.V. Gundappa
ಸತ್ಯವಂತನನರಸಲೆನುತ ಪೇಟೆಗಳೊಳಗೆ । ಹುಟ್ಟಹಗಲೊಳೆ ದೀವಿಗೆಯ ಹಿಡಿದು ನೆಡೆದು ॥ ಕೆಟ್ಟುದೀ ಜಗವೆಂದು ತೊಟ್ಟಿಯೊಳೆ ವಸಿಸಿದನು । ತಾತ್ತ್ವಿಕ ಡಯೋಜೆನಿಸ್ - ಮಂಕುತಿಮ್ಮ ॥ ೧೯೮ ॥
satyavantananu arasalenuta pETegaLoLage । huTTu hagaloLe dIvigeya hiDidu neDedu ॥ keTTudI jagavendu toTTiyoLe vasisidanu । tAttvika Dayojenis - Mankutimma ॥ 198 ॥
ಈಗ್ಗೆ ೨೪೨೪ ವರ್ಷಗಳ ಹಿಂದೆ ಗ್ರೀಕ್ ದೇಶದಲ್ಲಿ ಜನಿಸಿದ ಡಯೋಜೆನಿಸ್ ಎಂಬ ತತ್ವಜ್ಞಾನಿಯು “ಸತ್ಯವಂತನಾದ ವ್ಯಕ್ತಿಯಾರಾದರೂ ಸಿಗುವನೋ” ಎಂದು ಹಗಲಿನ ಹೊತ್ತಿನಲ್ಲಿ ದೀವಿಗೆಯನ್ನು ಹಿಡಿದುಕೊಂಡು ಪೇಟೆಬೀದಿಗಳಲ್ಲಿ ಹುಡುಕಿದನಂತೆ. ಅವನಿಗೆ ಯಾರೂ ಸಿಗದಾಗ, “ಈ ಜಗತ್ತು ಕೆಟ್ಟು ಹೋಗಿದೆ” ಎಂದು ತನ್ನ ಮನೆಯಲ್ಲಿ ಒಂದು ತೊಟ್ಟಿಯನ್ನು ಕಟ್ಟಿಸಿ ಅದರೊಳಗೆ ವಾಸಿಸತೊಡಗಿದನಂತೆ, ಎನ್ನುತ್ತಾ ಒಂದು ವಿಡಂಬನೆಯನ್ನು ಈ ಕಗ್ಗದ ಮೂಲಕ ಮಾನ್ಯ ಗುಂಡಪ್ಪನವರು ಪ್ರಸ್ತಾಪ ಮಾಡಿದ್ದಾರೆ.
"He went out to search for a honest person by holding a lamp in broad day light. He could not find one. He decided that the whole world is bad and started living a well. Such was the philosophy of Diogenes." - Mankutimma
Video Coming Soon
Detailed video explanations by scholars and experts will be available soon.