Mankutimmana Kagga by D.V. Gundappa
ಹೊಟ್ಟೆಯೊಂದರ ರಗಳೆ ಸಾಲದೆಂದೇನೊ ವಿಧಿ । ಹೊಟ್ಟೆಕಿಚ್ಚಿನ ಕಿಡಿಯ ನೆಟ್ಟಿಹನು ನರನೊಳ್ ॥ ಹೊಟ್ಟೆತುಂಬಿದ ತೋಳ ಮಲಗೀತು; ನೀಂ ಪೆರರ । ದಿಟ್ಟಿಸುತ ಕರುಬುವೆಯೊ - ಮಂಕುತಿಮ್ಮ ॥ ೨೦೦ ॥
hoTTeyondara ragaLe sAladendEno vidhi । hoTTe kichchina kiDiya neTTihanu naranoL ॥ hoTTe tumbida tOLa malagItu; nIm perara । diTTisuta kurubuveyo - Mankutimma ॥ 200 ॥
ಊಟದ ಚಿಂತೆಯೊಂದು ಸಾಲದೇನೋ ಎಂಬಂತೆ, ಅಸೂಯೆ ಅಥವಾ ಹೊಟ್ಟೆಯುರಿಯ ಬೆಂಕಿಯನ್ನು ಮನುಷ್ಯರ ಮನಸ್ಸುಗಳಲ್ಲಿ ಆ ವಿಧಿಯು ನೆಟ್ಟಿದ್ದಾನೆ. ಹೊಟ್ಟೆಬಾಕತನಕ್ಕೆ ಅಥವಾ ಹಸಿವಿಗೆ ಹೆಸರಾದ ಪ್ರಾಣಿ ತೋಳ. ಆ ತೋಳವೂ ಹೊಟ್ಟೆ ತುಂಬಿದರೆ ನೆಮ್ಮದಿಯಿಂದ ನಿದ್ದೆ ಮಾಡುತ್ತದೆ, ಆದರೆ ಮನುಷ್ಯ ಮಾತ್ರ ಅನ್ಯರನ್ನು ನೋಡಿ ಕೊರಗುತ್ತಿರುತ್ತಾನೆ ಎಂದು ಮನುಷ್ಯರ ಅಸೂಯಾ ಪ್ರವೃತ್ತಿಯನ್ನು ಉಪಮೆಯ ಸಹಿತ ವಿಶ್ಲೇಷಣೆ ಮಾಡಿದ್ದಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.
"Just as if man does not suffer enough because of hunger in the stomach, man also has the fire in his belly (due to jealousy). Even a wolf (known to be always hungry) may sleep when its stomach is full. But man still worries (after having all his wishes satisfied) by looking at others." - Mankutimma
Video Coming Soon
Detailed video explanations by scholars and experts will be available soon.