Back to List

Kagga 209 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ದನ ಸಿಂಗ ಹುಲಿ ಹಕ್ಕಿ ಹಾವು ಮೀನ್ ಗಳಿಗೆಲ್ಲ । ಇನಿಸುಣಿಸು, ಬೆದೆ, ಬೆದರು - ಅಷ್ಟೆ ಜೀವಿತವು ॥ ಮನುಜನೆಂತನಿತರಿಂ ತೃಪ್ತಿವಡೆವನವಂಗೆ । ಕ್ಷಣಕ್ಷಣವು ಹೊಸ ಹಸಿವು - ಮಂಕುತಿಮ್ಮ ॥ ೨೦೯ ॥

dana singa huli hakki mIngaLigella । inisu uNisu, bede, bedaru - aShte jIvitavu ॥ manujanu enatanitarim tRuptivaDevu avange । kShaNa kShaNavu hosa hasivu - Mankutimma ॥ 209 ॥

Meaning in Kannada

ದನ,ಸಿಂಹ, ಹುಲಿ, ಹಕ್ಕಿ, ಹಾವು, ಮೀನು ಮಂತಾದ ಪ್ರಾಣಿಗಳಿಗೆ ಹಸಿವಾದಾಗ ಆಹಾರ, ಸಂತಾನಾಭಿವೃದ್ಧಿ ಮತ್ತು ತಮ್ಮನ್ನು ತಾವು ಕಾಪಾಡಿಕೊಳ್ಳುವುದಕ್ಕೆ ಪೂರಕವಾದ ಅವಶ್ಯಕತೆಗಳನ್ನು ಬಿಟ್ಟರೆ ಬೇರಾವ ಆಸೆಗಳೂ ಇರದು ಮತ್ತು ಅವುಗಳ ಜೀವಿತವು ಅಷ್ಟಕ್ಕೇ ಸೀಮಿತವು. ಆದರೆ ಕೋಟ್ಯಂತರ ಆಸೆ ಆಕಾಂಕ್ಷೆಗಳ ಆಗರವೇ ಆದ ಮನುಷ್ಯ ಎಂದಿಗೂ ತೃಪ್ತನಾಗುವುದೇ ಇಲ್ಲ. ಕ್ಷಣ ಕ್ಷಣವೂ ಅವನ ಆಸೆಗಳ ಹಸಿವು ಅಧಿಕವಾಗುತ್ತಲೇ ಇರುತ್ತದೆ ಎಂಬ ಭಾವವನ್ನು ವ್ಯಕ್ತಪಡಿಸಿದ್ದಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

Meaning & Interpretation

"Cow, lion, tiger, snake, fish and other animals have a simple definition of life. Struggle for food, secure a mate to have a healthy progeny, be scared about life (from predators or nature) - this pretty much completes their life and they are happy if they are able to do just that. But man is not like them. He is not happy just doing the same. His desires grow and change every second." - Mankutimma

Themes

LifeSufferingNatureLoveWar

Video Section

Video Coming Soon

Detailed video explanations by scholars and experts will be available soon.