Mankutimmana Kagga by D.V. Gundappa
ಹೊನ್ನೆಂದು ಜಗದಿ ನೀಂ ಕೈಗೆ ಕೊಂಡುದನು ವಿಧಿ । ಮಣ್ಣೆನುವನ್; ಅವನ ವರ ಮಣ್ಣೆನುವೆ ನೀನು ॥ ಭಿನ್ನಮಿಂತಿರೆ ವಸ್ತುಮೌಲ್ಯಹಳ ಗಣನೆಯೀ । ಪಣ್ಯಕ್ಕೆ ಗತಿಯೆಂತೊ? - ಮಂಕುತಿಮ್ಮ ॥ ೨೧ ॥
honnendu jagadi nIM kaige konDudanu vidhi । maNNenuvan; avana vara maNNenuve nInu ॥ bhinnam intire vastu maulyagaLa gaNane ee । paNyakke gatiyento? - Mankutimma ॥ 21 ॥
ಯಾವುದನ್ನು ನೀನು ಚಿನ್ನ ಎಂದು ಕೈಗೆ ಎತ್ತಿಕೊಳ್ಳುತೀಯೋ, ಅದು ವಾಸ್ತವದಲ್ಲಿ ಚಿನ್ನವಾಗಿರದೆ, ಮಣ್ಣಂತೆ ನಿಷ್ಪ್ರಯೋಜಕವಾಗುತ್ತದೆ. ಆದರೆ ಕೆಲವು ಬಾರಿ ಬಯಸದೆ ಸಂದ ಭಾಗ್ಯವನ್ನು, ಆಪರಮಾತ್ಮನ ಕರುಣೆಯಿಂದ ವರ ರೂಪದಲ್ಲಿ ಸಂದದ್ದು ನಿನಗೆ ನಿಷ್ಪ್ರಯೋಜಕವಾಗಿ ಕಾಣುತ್ತದೆ. ಹೀಗೆ ವಸ್ತುಗಳ ನಿಜರೂಪ ಗುರುತಿಸುವುದರಲ್ಲಿ ನಮಗೆ ವ್ಯತ್ಯಾಸವಾದರೆ ಈ ಜಗತ್ತಿನ ವ್ಯಾಪಾರ ನಡೆಯುವುದು ಹೇಗೆ ಎಂದು ಪ್ರಶ್ನಿಸುತ್ತಾರೆ ಮಾನ್ಯ ಗುಂಡಪ್ಪನವರು.
What you treasure in this world as gold - fate treats it like dirt. You treat the boons given by providence as dirt. If the valuations of the materials is so different, then how can any trade be fair? - Mankutimma
Video Coming Soon
Detailed video explanations by scholars and experts will be available soon.