Back to List

Kagga 211 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ । ತಣಿಸಲದನೊಗೆಯುವುದು ಬಗೆಬಗೆಯ ಯುಕ್ತಿ ॥ ಮನುಜನೇಳಿಗೆಯದರಿನ್; ಆ ಮನಸಿನೇಳಿಗೆಗೆ । ಕೊನೆಯೆಲ್ಲಿ? ಚಿಂತಿಸೆಲೊ - ಮಂಕುತಿಮ್ಮ ॥ ೨೧೧ ॥

manasu beLedantella hasivu beLeyuvudayya । taNisaladanu ogeyuvudu bagebageya yukti ॥ manujana ELige adarin; A manasina ELigege । koneyelli? chintiselo - Mankutimma ॥ 211 ॥

Meaning in Kannada

ಮನುಷ್ಯನ ಮನಸ್ಸು ಬೆಳೆದಂತೆಲ್ಲ ಅವನ ಮನಸ್ಸಿನ ಹಸಿವೂ ಸಹ ಬೆಳೆಯುತ್ತದೆ. ಆ ಹಸಿವನ್ನು ಇಂಗಿಸಲು ಮನಸ್ಸು ಬಗೆ ಬಗೆಯ ಉಪಾಯಗಳನ್ನು ಹುಡುಕುತ್ತದೆ. ಈ ರೀತಿಯ ಹಸಿವು ಮತ್ತು ಆ ಹಸಿವಿನ ತಣಿಯುವಿಕೆಯಿಂದ ಮನುಷ್ಯನ ಬಾಹ್ಯ ಜೀವನ ಉತ್ತಮವಾಗಬಹುದು.ಈ ರೀತಿ ಆಸೆ ಪಡುವುದು, ಆ ಆಸೆಗಳನ್ನು ತೀರಿಸಿಕೊಳ್ಳಲು ಹಲವಾರು ಉಪಾಯಗಳನ್ನು ಮಾಡುವುದು ಮತ್ತು ಈ ಉಪಾಯಗಳಿಂದ ಉನ್ನತ ಸ್ಥಾನ ಹೊಂದುವುದು, ಹೀಗೆ ನಡೆಯುವ ಏಳಿಗೆಗೆ ಕೊನೆಯಲ್ಲಿ ಎಂದು ಒಂದು ಪ್ರಶ್ನೆಯ ಮೂಲಕ ಬಹಳ ಗಹನವಾದ ವಿಚಾರವನ್ನು ಈ ಕಗ್ಗದಲ್ಲಿ ಪ್ರಸ್ತುತ ಪಡಿಸುತ್ತಾರೆ ಮಾನ್ಯ ಗುಂಡಪ್ಪನವರು.

Meaning & Interpretation

"As the mind grows, so does the hunger. To satiate that hunger the mind comes up with various novel ideas. These ideas are the cause of human progress perhaps leading to the growth of mind. But, is there an end to this cycle of growth of the mind? Think." - Mankutimma

Themes

Death

Video Section

Video Coming Soon

Detailed video explanations by scholars and experts will be available soon.