Mankutimmana Kagga by D.V. Gundappa
ತೆರೆಯೇಳುವುದು ದೈವಸತ್ತ್ವ ನರನೊಳು ನೆರೆಯೆ । ತೆರೆ ಬೀಳುವುದು ಕರ್ಮವಿಧಿಯಿದಿರು ಪರಿಯೆ ॥ ತೆರೆಯನಾನುತೆ ತಗ್ಗು, ತಗ್ಗನಾನುತಲಿ ತೆರೆ । ತೆರೆತಗ್ಗುಗಳಿನೆ ತೊರೆ - ಮಂಕುತಿಮ್ಮ ॥ ೨೩೦ ॥
tereyu ELuvudu daiva sattva naranoLu nereye । tere bILuvudu karma vidhiya idiru pariye ॥ tereyanu Anute taggu, tagganu Anutali tere । tere taggugaLine tore - Mankutimma ॥ 230 ॥
ಮನುಷ್ಯನ ಮನಸ್ಸಿನಲ್ಲಿ ಆ ಪರಮಾತ್ಮ ತತ್ವ ತುಂಬಿದಾಗ ಒಂದು ಆಧ್ಯಾತ್ಮಿಕ ಭಾವ ಉನ್ನತವಾಗಿರುತ್ತದೆ. ಆದರೆ ಬದುಕಿನ ಕೆಲಸಕಾರ್ಯಗಳಲ್ಲಿ ಮಗ್ನರಾದಾಗ ಆ ಭಾವ ಮರೆಯಾಗಿ ನಾವು ಮತ್ತೆ ಪ್ರಾಪಂಚಿಕ ವಿಷಯಗಳಲ್ಲಿ ಬೀಳುತ್ತೇವೆ. ಮತ್ತೆ ಆ ಪಾರಮಾರ್ಥಿಕ ಭಾವ ಮನದಲ್ಲಿ ತುಂಬಿಕೊಂಡಾಗ ಮತ್ತೆ ಮೇಲೇಳುತ್ತೇವೆ ಹೀಗೆ ಏಳುತ್ತಾ ಬೀಳುತ್ತಾ ಸಾಗುವುದೇ ಜೀವನದ ಪ್ರಯಾಣ ಎಂದು ಒಂದು ಸುವಿಚಾರವನ್ನು ಪ್ರಸ್ತಾಪಮಾಡುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.
"Man's progress is like the waves of a stream. They rise when the cosmic spirit fills them with freshness. When man suffers the consequences of his own actions, the wave falls. Low follows a high and high follows a low. Alternating between highs and lows is the hall mark of life." - Mankutimma
Video Coming Soon
Detailed video explanations by scholars and experts will be available soon.