Mankutimmana Kagga by D.V. Gundappa
ಇಂದೆದ್ದ ತೆರೆ ನಾಳೆ ಬೀಳುವುದು; ಮರುವಗಲು । ಮುಂದೆ ತಾನೇಳುವುದು ಬೇರೆ ಗಾತ್ರದಲಿ ॥ ಇಂದು ನಾಳೆಗಳನೆಲ್ಲವ ಕೂಡಿ ನೋಡಿದೊಡೆ । ಮುಂದಹುದು ಬೆರಗೊಂದೆ - ಮಂಕುತಿಮ್ಮ ॥ ೨೩೧ ॥
indedda tere nALe bILuvudu; maruvagalu । munde tAnu ELuvudu bEre gAtradali ॥ indu nALegalanu ellava kUDi nODidoDe । mundahudu beragonde - Mankutimma ॥ 231 ॥
ಇಂದು ಎದ್ದ ತೆರೆ ಬೀಳುವುದು ಮತ್ತೆ ಮರುದಿವಸ ಇನ್ನೊಂದು ತೆರೆ ಬೇರೆ ಗಾತ್ರದಲಿ ಏಳುವುದು. ಹಾಗೆ ಇಂದು ನಾಳೆಗಳ ಬೇರೆ ಬೇರೆ ಗಾತ್ರದ ತೆರೆಗಳನ್ನೆಲ್ಲ ಒಟ್ಟುಗೂಡಿಸಿದರೆ ಅದರ ಹಿಂದೆ ನಮಗೆ ಒಂದು ವಿಶಾಲವಾದ ಕಡಲು ಕಾಣುವಂತೆ, ನಮ್ಮ ಮನಸ್ಸುಗಳಲ್ಲಿ ಬೇರೆ ಬೇರೆ ರೀತಿಯಲ್ಲಿ, ರೂಪದಲ್ಲಿ, ಗಾತ್ರದಲ್ಲಿ ಮತ್ತು ಬೇರೆ ಸಮಯದಲ್ಲಿ, ಬೇರೆ ಬೇರೆ ಕಾರಣಗಳಿಗೆ ಎಂದ್ದಂತಹ ಪರತತ್ವದ ಭಾವಗಳನ್ನೆಲ್ಲ ಒಟ್ಟು ಮಾಡಿದರೆ ನಮಗೆ ಆ ಪರತತ್ವದಿಂದ ಪ್ರತಿರೂಪವಾದ ಪರಮಾತ್ಮನ ಅರಿವು ಮೂಡುತ್ತದೆ ಎಂದು ಒಂದು ಗಹನವಾದ ವಿಚಾರವನ್ನು ಈ ಕಗ್ಗದ ಮೂಲಕ ಮಾನ್ಯ ಗುಂಡಪ್ಪನವರು ಮಂಡಿಸಿದ್ದಾರೆ.
"High part of today will fall tomorrow. Again it will raise tomorrow in a different spot, in a different form. Only when you see today and tomorrow together, you will realise that it has moved forward. Mankin'd progress is like that." - Mankutimma
Video Coming Soon
Detailed video explanations by scholars and experts will be available soon.