Back to List

Kagga 234 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ಕಣ್ಣೆರಡದೇಕೆರಡುಮೊಂದೆ ಪಕ್ಕದೊಳೇಕೆ? । ಬೆನ್ನೊಳೊಂದೆದೆಯೊಳೊಂದಿರಲು ಸುಕರವಲ? ॥ ಅನ್ಯಾಯ ವಿಕಟಂಗಳೆನಿತೊ ಸೃಷ್ಟಿಕ್ರಮದಿ! । ಸೊನ್ನೆ ಜನವಾಕ್ಕಲ್ಲಿ - ಮಂಕುತಿಮ್ಮ ॥ ೨೩೪ ॥

kaNNu eraDum onde pakkadoLEke? । bennoLondu edeyoLondiralu sukaravala? ॥ anyAya vikaTangaLu enito sRuShTi kramadi । sonne jana vAk alli - Mankutimma ॥ 234 ॥

Meaning in Kannada

ನಮಗೆ ಎರಡು ಕಣ್ಣುಗಳು ಇವೆ. ಅವರೆಡೂ ಮುಖದಲ್ಲಿ ಪಕ್ಕ ಪಕ್ಕದಲ್ಲಿ ಇವೆ. ಅದು ಏಕೆ ಹಾಗಿದೆ? ಮುಖದಲ್ಲಿ ಒಂದು ಬೆನ್ನಲ್ಲಿ ಒಂದು ಇದ್ದಿದ್ದಿದ್ದರೆ ಸುಲಭವಾಗಿ ಹಿಂದೆ ಮುಂದೆ ಎರಡೂ ಕಡೆ ನೋಡಲು ಆಗುತ್ತಿತ್ತಲ್ಲ, ಎಂದು ಚಿತ್ರವಿಚಿತ್ರವಾಗಿ ಮನುಷ್ಯ ಯೋಚಿಸುತ್ತಾನೆ. ಆದರೆ ಹೀಗೆ ಸೃಷ್ಟಿಕ್ರಮದಲ್ಲಿ ಎಷ್ಟೋ ವಿಚಿತ್ರಗಳು ಇವೆ. ಈ ರೀತಿಯ ಸೃಷ್ಟಿಯ ವಿಚಿತ್ರಗಳನ್ನು ಪ್ರಶ್ನಿಸುವ ಅಧಿಕಾರ ಮನುಷ್ಯನಿಗೆ ಇಲ್ಲ ಎಂಬ ಮಾನ್ಯ ಗುಂಡಪ್ಪನವರ ಭಾವವೇ ಈ ಕಗ್ಗದ ಹೂರಣ.

Meaning & Interpretation

"Why are the two eyes on the same side next to each other? One in the back and another in the front would be very useful. Right? Nature's ways are sometimes strange and at times unfair also. Man's opinions have no value there." - Mankutimma

Themes

MoralityNature

Video Section

Video Coming Soon

Detailed video explanations by scholars and experts will be available soon.