Mankutimmana Kagga by D.V. Gundappa
ಧರೆ ಸಸ್ಯಫಲದಿ ಜೀವಿಗೆ ಪುಷ್ಟಿಯಿತ್ತೊಡೇಂ? । ಮರಳಿ ತಾಂ ಪಡೆಯಳೇನ್ ಅವನಿನರ್ಧವನು? ॥ ಧರಣಿಗೇ ನಮ್ಮೊಡಲು ಹುಯ್ಗಡುಬು ತಪ್ಪಲೆಯೊ! । ಪರಮೇಷ್ಠಿ ಯುಕ್ತಿಯದು - ಮಂಕುತಿಮ್ಮ ॥ ೨೩೫ ॥
dhare sasya phaladi jIvige puShTiyittoDEm? । maraLi tAm paDeyaLEn avanina ardhavanu? ॥ dharaNigE nammoDalu huygaDubu tappaleyo । paramEShThi yuktiyadu - Mankutimma ॥ 235 ॥
ನಮ್ಮ ಭೂಮಿ ತಾಯಿ ಈ ಸೃಷ್ಟಿಯಲ್ಲಿರುವ ಎಲ್ಲ ಪ್ರಾಣಿಗಳಿಗೂ ಪುಷ್ಟಿಕರವಾದ ಆಹಾರವನ್ನು ಇತ್ತು, ಇತ್ತುದರ ಅರ್ಧವನ್ನು ಮತ್ತೆ ಪಡೆದು ಬಿಡುತ್ತಾಳೆ. "ತನಗೆ ಬೇಕಾದ್ದನ್ನು ನಮ್ಮಲ್ಲಿ ಬೇಯಿಸಿಕೊಳ್ಳಲಿಕ್ಕೆ ನಮ್ಮ ದೇಹವನ್ನೇನಾದರೂ ಹಬೆಯಿಂದ ಮಾಡುವ ಇಡ್ಲಿ ಪಾತ್ರೆಯಂತೆ ಸೃಷ್ಟಿಕರ್ತ ಉಪಯೋಗಿಸುತ್ತಾನೋ?" ಎಂದು ಒಂದು ಪ್ರಶೆಯನ್ನು ಕೇಳಿದ್ದಾರೆ, ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ ಒಂದು ಮರದಲ್ಲಿ ಚಿಗುರು, ಹೂ, ಕಾಯಿ, ಹಣ್ಣು ಮತ್ತು ಬೀಜ ಉತ್ಪತ್ತಿಯಾಗಬೇಕಾದರೆ, ಆ ಮರ ತನ್ನ ಬೇರುಗಳ ಮೂಲಕ ಧರೆಯಿಂದ ಸತ್ವವನ್ನು ಹೀರಿಕೊಳ್ಳುತ್ತದೆ. ಆ ಮರದ ಎಲೆಗಳನ್ನು ಶರದೃತುವಿನಲ್ಲಿ ಉದುರುವಂತೆ ಮಾಡಿ, ಅವು ಮತ್ತೆ ಗೊಬ್ಬರದ ರೂಪದಲ್ಲಿ ಭೂಮಿಗೆ ಸತ್ವವಾಗುವುದರ ಮೂಲಕ, ಭೂಮಿ, ಎಲೆಗಳಿಗೆ ತಾನಿತ್ತ ಸತ್ವದ ಅರ್ದವನ್ನು ತಾನೇ ಪಡೆದು ಮತ್ತೆ ತನ್ನಲ್ಲಿ ಆ ಮರಕ್ಕೆ ಸಾರವನ್ನು ನೀಡುವ ಕ್ಷಮತೆಯನ್ನು ಬೆಳೆಸಿಕೊಳ್ಳುತ್ತದೆ.
"The earth gives man the fruits as nutrition to help him grow. Later it takes back part of what it gives. After death man's body gets back into earth. Our bodies are like bowls of kadubu (delicacy). It is the brilliance of the Creator that everything comes around a full circle." - Mankutimma
Video Coming Soon
Detailed video explanations by scholars and experts will be available soon.