Mankutimmana Kagga by D.V. Gundappa
ನೆಲವೊಂದೆ, ಹೊಲ ಗದ್ದೆ ತೋಟ ಮರಳೆರೆ ಬೇರೆ । ಜಲವೊಂದೆ, ಸಿಹಿಯುಪ್ಪು ಜವುಗೂಟೆ ಬೇರೆ ॥ ಕುಲವೊಂದರೊಳೆ ಸೋದರವ್ಯಕ್ತಿಗುಣ ಬೇರೆ । ಹಲವುಮೊಂದುಂ ಸಾಜ - ಮಂಕುತಿಮ್ಮ ॥ ೨೩೭ ॥
nelavonde, hola gadde tOTa maraLere bEre । jalavonde, sihi uppu javugUTe bEre ॥ kulavondaroLe sOdara vyaktiguNa bEre । halavum ondum sAja - Mankutimma ॥ 237 ॥
ಮಾನ್ಯಗುಂಡಪ್ಪನವರು ಈ ಕಗ್ಗದಲ್ಲಿ ಜಗತ್ತಿನ ವೈವಿಧ್ಯತೆಯ ಒಂದು ಆಯಾಮವನ್ನು ನಮಗೆ ಪರಿಚಯ ಮಾಡುತ್ತಾರೆ. ಇಲ್ಲಿ ನೆಲವೊಂದೆ ಆದರೂ ಅದನ್ನು ಹೊಲ, ಗದ್ದೆ, ತೋಟ ಎಂದು ಅಲ್ಲಿನ ಮಣ್ಣಿನ ಗುಣ, ನೀರಿನ ಅನುಕೂಲ. ಮತ್ತು ನೀರಿನ ಗುಣದ ಆಧಾರದಮೇಲೆ ವಿಂಗಡಿಸುತ್ತಾರೆ. ಒಂದೇ ನೆಲವಾದರೂ ಒಂದೇ ರೀತಿಯ ವಾತಾವರಣವಿದ್ದರೂ, ಅಲ್ಲಿ ಬೆಳೆಯುವ ಬೆಳೆಗಳ ಮತ್ತು ಗಿಡಗಳ ವೈವಿಧ್ಯತೆ ಬಹಳ ಅದ್ಭುತ. ಇದು ಸೃಷ್ಟಿಯ ವೈವಿಧ್ಯತೆ. ಒಂದೇ ನೆಲ, ಒಂದೇ ಜಲ ಮತ್ತು ಒಂದೇ ವಾತಾವರಣವನ್ನು ಹಂಚಿಕೊಂಡರೂ ಒಂದು ಮಾವು ಮತ್ತೊಂದು ಬೇವು. ಇದೇ ರೀತಿ ಒಂದೇ ನೆಲವನ್ನು ಹಂಚಿಕೊಂಡ, ಒಂದೇ ನೀರನ್ನು ಕುಡಿವ, ಒಂದೇ ಗಾಳಿಯನ್ನು ಸೇವಿಸುವ ಮನುಷ್ಯ ಮನುಷ್ಯರಲ್ಲಿ ಎಷ್ಟೊಂದು ಬೇಧ ಎಂಬ ವಿಚಾರವನ್ನು ಸುಂದರವಾಗಿ ಪ್ರಸ್ತಾಪಮಾಡಿದ್ದಾರೆ ಮಾನ್ಯ ಡಿ .ವಿ. ಜಿ ಯವರು
"Its the same land. But a farmland, a garden or a desert are all different. Water is the same. But some are sweet, salty or hard. People may be from same family. But they may have different characters. Being same as others and being different are all very natural." - Mankutimma
Video Coming Soon
Detailed video explanations by scholars and experts will be available soon.