Mankutimmana Kagga by D.V. Gundappa
ಜೀವಗತಿಗೊಂದು ರೇಖಾಲೇಖವಿರಬೇಕು । ನಾವಿಕನಿಗಿರುವಂತೆ ದಿಕ್ಕು ದಿನವೆಣಿಸೆ ॥ ಭಾವಿಸುವುದೆಂತದನು ಮೊದಲು ಕೊನೆ ತೋರದಿರೆ? । ಆವುದೀ ಜಗಕಾದಿ? - ಮಂಕುತಿಮ್ಮ ॥ ೨೫ ॥
jIvagatigondu rEkhAlEkha । nAvikanigiruvante dikku dinavaNise ॥ bhAvisuvudu entadanu modalu kone tOradire? । AvudI jagakAdi? - Mankutimma ॥ 25 ॥
ಒಂದು ಹಡಗನ್ನು ನಡೆಸಲು ನಾವಿಕನಿಗೆ ಒಂದು ದಿಕ್ಸೂಚಿ ಇರುತ್ತದೆ. ಸುತ್ತಲೂ ಸಮುದ್ರ ಮಧ್ಯದಲ್ಲಿ ಹಡಗು. ತನ್ನ ಗಮ್ಯದ ಕಡೆಗೆ ಹೋಗಲು ಆ ನಾವಿಕನಿಗೆ ದಿಕ್ಕನ್ನು ತೋರಲು ಒಂದು ದಿಕ್ಸೂಚಿ ಬೇಕು. ಆ ದಿಕ್ಸೂಚಿಯ ಸೂಚನೆಯಂತೆ ನಾವಿಕನು ಮುಂದುವರೆಯುತ್ತಾನೆ. ಆಗ ಹಡಗು ಆ ದಿಕ್ಕಿನಲ್ಲಿ ನೇರ ಹೋಗುತ್ತದೆ. ಆದರೆ ಜೀವನದ ಗತಿಗೆ ದಿಕ್ಸೂಚಿ ಯಾವುದು, ಇಲ್ಲ . ಅಂಥಹ ಒಂದು ದಿಕ್ಸೂಚಿ ಬೇಕು ಎನ್ನುತ್ತಾರೆ ಮಾನ್ಯ ಗುಂಡಪ್ಪನವರು. ಅಂದರೆ ಜೀವನದ ಗತಿಗೆ ಒಂದು ನೇರ ನಡೆ ಇಲ್ಲ. ಆ ನೇರ ನಡೆ ಬೇಕಾದರೆ ಒಂದು ನೇರ ಗೆರೆ ಬೇಕು ಎನ್ನುತ್ತಾರೆ. ಹೌದು ಇಡೀ ಬದುಕಿಗೆ ಒಂದು ನಿರ್ಧಿಷ್ಟ ಗತಿ ಅಥವಾ ಒಂದು ನಿರ್ಧಿಷ್ಟ ಯಾನದ ದಾರಿ ಇಲ್ಲ.
Just like a navigator (of a ship) uses a map (direction) and counts days to sail on a course our lives require such a blue-print. How can we understand (or come up with) the blueprint if we know neither the beginning nor the end? How did it all start? - Mankutimma
Video Coming Soon
Detailed video explanations by scholars and experts will be available soon.