Back to List

Kagga 31 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ಬಚ್ಚಿಟ್ಟುಕೊಂಡಿಹುದೆ ಸತ್ಯ ಮಿಥ್ಯೆಯ ಹಿಂದೆ? । ನಚ್ಚುವುದೆ ಮರೆಯೊಳಿಹುದನೆ ಸತ್ಯವೆಂದು? ॥ ಅಚ್ಚರಿಯ ತಂತ್ರವಿದು; ಬ್ರಹ್ಮಸೃಷ್ಟಿಗಳೇಕೊ । ಮುಚ್ಚಿಹವು ಸಾಜತೆಯ - ಮಂಕುತಿಮ್ಮ ॥ ೩೧ ॥

bacchiTTukondihude satya mithyeya hinde? । nacchuvide mareyoLihudane satyavendu? ॥ accariya tantravidu; brahmasRuShTigaLEko । mucchihavu sAjateya - Mankutimma ॥ 31 ॥

Meaning in Kannada

ಸತ್ಯವಾದ ಆ ಪರಮಾತ್ಮವಸ್ತು ಅಸತ್ಯವಾದ ಈ ಸೃಷ್ಟಿಯ ಹಿಂದೆ ಬಚ್ಚಿಟ್ಟುಕೊಂಡಿರುವುದೇ? ಜಗತ್ತು ಕಾಣುತ್ತದೆ. ಇಂದ್ರಿಯ ಗ್ರಾಹ್ಯ. ಇದನ್ನು ಮಿಥ್ಯವೆಂದು ಅಸಥ್ಯವೆಂದು ಹೇಳುತ್ತಾರೆ. ಆದರೆ ಅದನ್ನು ಸೃಜಿಸಿದ ಶಕ್ತಿ ಕಾಣುವುದಿಲ್ಲ. ಭಾವಿಸಬಹುದು ಮತ್ತು ಕೇವಲ ಅನುಭವ ವೇಧ್ಯ. ಅದನ್ನು ಸತ್ಯವೆನ್ನುತ್ತಾರೆ.ಕಣ್ಣಿಗೆ ಕಾಣದೆ, ಮರೆಯಲ್ಲಿರುವುದನ್ನು ಸತ್ಯವೆಂದು ನಂಬುವುದು ಹೇಗೆ. ಈ ಸೃಷ್ಟಿಕರ್ತ ಮತ್ತು ಅವನ ಸೃಷ್ಟಿಯ ತಂತ್ರ ಬಹಳ ಆಶ್ಚರ್ಯಕರವಾದವು ಮತ್ತು ಸಹಜತೆಯು ಮುಚ್ಚಿಹುದು, ಸ್ಪಷ್ಟವಿಲ್ಲದೆ ,ಎನ್ನುತ್ತಾರೆ ಈ ಕಗ್ಗದಲ್ಲಿ ಮಾನ್ಯ ಗುಂಡಪ್ಪನವರು.

Meaning & Interpretation

Is the truth hiding behind the viel of deceit? Can I believe that what ever is hiding to be the truth? It looks lke a strange ploy by the creations of God - they all mask the truth. - Mankutimma

Themes

DevotionWisdomNature

Video Section

Video Coming Soon

Detailed video explanations by scholars and experts will be available soon.