Mankutimmana Kagga by D.V. Gundappa
ತಿರುತಿರುಗಿ ತಿರುಗುತ್ತೆ ಬುಗುರಿ ತಾನೇ ಸೋತು । ತಿರೆಗುರುಳುವುದು ತನ್ನ ಬಲವ ತಾಂ ಕಳೆದು ॥ ನರನುಮಂತೆಯೆ ಸುತ್ತಿ ಕಡೆಗೊಂದು ದಿನ । ತೆರುವನಸ್ಥಿಯ ಧರೆಗೆ - ಮಂಕುತಿಮ್ಮ ॥ ೩೧೬ ॥
tirutirugi tirugutte buguri tAnE sOtu । tirege uruLuvudu tanna balava tAM kaLedu ॥ naranum anteye sutti kaDege ondu dina । teruvanu asthiya dharege - Mankutimma ॥ 316 ॥
ಒಂದು ಬುಗುರಿಗೆ ಚಾಟಿಯನ್ನು ಸುತ್ತಿ ಜೋರಾಗಿ ತಿರುಗಿಸಿದಾಗ, ಅದು ನಾವು ಕೊಟ್ಟ ಜೋರು ಕಡಿಮೆಯಾಗುವತನಕ ಸುತ್ತುತ್ತದೆ. ಜೋರು ಕಡಿಮೆಯಾಗುತ್ತಾ ತನ್ನ ತಿರುಗುವ ವೇಗವನ್ನು ಕಡಿಮೆ ಮಾಡಿಕೊಂಡು ನಿಧಾನವಾಗಿ ಸುತ್ತುತ್ತಾ ಕೆಳಗೆ ಬೀಳುತ್ತದೆ. ಹಾಗೆಯೇ ಮನುಷ್ಯನೂ ಸಹ ಶಕ್ತಿಯಿರುವವರೆಗೂ ಸುತ್ತ್ತಿ ಸುತ್ತಿ ಏನನ್ನೋ ಸಾಧಿಸಬೇಕೆಂದು ಓಡಿ ಓಡಿ ಶಕ್ತಿಯಲ್ಲ ಕುಂದಿ ಧರೆಗೆ ಬಿದ್ದು, ಸಾವನ್ನಪ್ಪಿ ತನ್ನ ದೇಹವನ್ನು ಈ ಧರೆಗೇ ಒಪ್ಪಿಸುತ್ತಾನೆ ಎನ್ನುತ್ತಾರೆ ಮಾನ್ಯ ಗುಂಡಪ್ಪನವರು.
"A top spins beautifully. It may think it is the master of its own fate. But it loses and slows down. It falls on the ground when it has not more strength. Man is also like that. As long as he has any strength in him, he will continue to stay in action - creating things. Once the strength vanishes, he is burried and becomes one with the earth." - Mankutimma
Video Coming Soon
Detailed video explanations by scholars and experts will be available soon.