Mankutimmana Kagga by D.V. Gundappa
ಹಾಸ್ಯಗಾರನೊ ಬೊಮ್ಮ; ವಿಕಟ ಪರಿಹಾಸವದು । ಆಸ್ಯ ಗಂಭೀರ; ಬೆರಲಿಂದ ಚಕಳಗುಳಿ ॥ ವಿಶ್ವಾಸದುಪಚಾರ; ಹುಣಿಸೆಮೆಣಸಾಹಾರ । ವಿಶ್ವಪಾಲನೆಯಿಂತು - ಮಂಕುತಿಮ್ಮ ॥ ೩೧೮ ॥
hAsyagArano bomma; vikaTa parihAsavu adu । Asya gambhIra; beralinda chakaLaguLi ॥ vishvAsada upachAra; huNise meNasu AhAra । vishvapAlaneyintu - Mankutimma ॥ 318 ॥
ನಮ್ಮನ್ನು ಸೃಷ್ಟಿಸಿದ ಆ ಬ್ರಹ್ಮ ವಿಕಟತೆಯಿಂದ ಕೂಡಿದ ಹಾಸ್ಯಗಾರನೋ? ಅವನ ಮುಖ ಮಾತ್ರ ಗಂಭೀರವಾಗಿದ್ದರೂ, ಬೆರಳಿಂದ ಕಚಗುಳಿ ಇಡುತ್ತಾ ನಮ್ಮನ್ನು ನಗಿಸಲು ಪ್ರಯತ್ನಿಸುವ ಅಥವಾ ಬಹಳ ವಿಶ್ವಾಸದಿಂದ ನಮಗೆ ಉಪಚಾರ ಮಾಡುತ್ತಾ ಭೋಜನವ ಬಡಿಸಿ ಊಟದಲ್ಲಿ ಹುಣಸೆಯ ಹುಳಿಯನ್ನೂ, ಮೆಣಸಿನ ಖಾರವನ್ನೂಇಟ್ಟಂತೆ, ನಮಗೆ ಜೀವನದಲ್ಲಿ ಗುಣ-ಅವಗುಣ, ಸಂತೋಷ – ದುಃಖ, ಹೀಗೆ ಒಂದಕ್ಕೊಂದು ವಿರೋಧವಾದದ್ದನ್ನು ಇಟ್ಟು ನಮ್ಮ ಪರಿಸ್ಥಿತಿ ನೋಡಿ ತಾನು ಆನಂದವನ್ನು ಅನುಭವಿಸುತ್ತಿದ್ದಾನೋ ಆ ಬ್ರಹ್ಮ ಎಂದು ಪ್ರಸ್ತಾಪಮಾಡಿದ್ದಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.
"The Creator is a funny person. Such is his humour - He is very straight faced, but he tickles you with his fingers. It is like some one greeting you well when you go to their home, but serve only sour and spicy food. This is the way he runs this world." - Mankutimma
Video Coming Soon
Detailed video explanations by scholars and experts will be available soon.