Back to List

Kagga 331 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ಸತ್ಯ ಶಿವ ಸುಂದರದ ಸಚ್ಚಿದಾನಂದನದ । ಭಿತ್ತಿಯಲಿ ಬಣ್ಣಬಣ್ಣದ ಜೀವಚಿತ್ರ ॥ ನಿತ್ಯ ನೀನದ ನೆನೆದು ಚಿತ್ರದಲಿ ಮನವಿರಿಸೆ । ವೃತ್ತಿ ತನ್ಮಯವಹುದೊ - ಮಂಕುತಿಮ್ಮ ॥ ೩೩೧ ॥

satya shiva sundarada sat chit Anandanada । bhittiyali baNNabaNNAda jIvachitra ॥ nitya nInu ada nenedu chitradali mana irise । vRutti tanmaya ahudo - Mankutimma ॥ 331 ॥

Meaning in Kannada

ಜಗತ್ತಿನ ಸೃಷ್ಟಿಯ ಚಿತ್ರ, ಸತ್ಯವಾಗಿಯೂ ಮಂಗಳಕರವಾಗಿಯೂ,ಸುಂದರವಾಗಿಯೂ ಇದ್ದು, ಸಚ್ಚಿದಾನಂದ ಸ್ವರೂಪದಿಂದಿದೆ. ಪ್ರತಿ ನಿತ್ಯ ನೀನು ಅಂತಹ ಚಿತ್ರದಲ್ಲಿ ನಿನ್ನ ಚಿತ್ತವನು ಇರಿಸಿದರೆ ನೀ ಮಾಡುವ ಕೆಲಸ ತನ್ಮಯತೆಯಿಂದ ಕೂಡಿರುತ್ತದೆ ಎಂದು ನಾವು, ಈ ಪರಮಾತ್ಮನ ಸೃಷ್ಟಿಯಲ್ಲಿ ಏನನ್ನು ಮತ್ತು ಜಗಚ್ಚಿತ್ರವನ್ನು ಹೇಗೆ ಕಾಣಬೇಕು ಎಂದು ಸೂಚಿಸಿದ್ದಾರೆ ಮಾನ್ಯ ಗುಂಡಪ್ಪನವರು ಈ ಮುಕ್ತಕದಲ್ಲಿ.

Meaning & Interpretation

"Sat (truth), Chit(inner peace) and Ananda (happiness) are the qualities of the cosmic spirit. It is also our base qualities (Satya (truth), Shiva (peace), Sundara (beauty))that we may have forgotten. On a canvas of these qualities, the colourful picture of life is drawn. You should channelise your mind every day towards these qualities. Then whatever work you do will attain the same qualities." - Mankutimma

Themes

WisdomLifeWarPeaceDuty

Video Section

Video Coming Soon

Detailed video explanations by scholars and experts will be available soon.