Back to List

Kagga 34 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ಎಷ್ಟು ಚಿಂತಿಸಿದೊಡಂ ಶಂಕೆಯನೆ ಬೆಳಸುವೀ । ಸೃಷ್ಟಿಯಲಿ ತತ್ತ್ವವೆಲ್ಲಿಯೋ ಬೆದಕಿ ನರನು ॥ ಕಷ್ಟಪಡುತಿರಲೆನುವುದೋ ಬ್ರಹ್ಮವಿಧಿಯೇನೋ! । ಅಷ್ಟೆ ನಮ್ಮಯ ಪಾಡು? - ಮಂಕುತಿಮ್ಮ ॥ ೩೪ ॥

eshtu chintisidoDam shankeyane beLasivI । srushtiyali tattvavu elliyO bedaki naranu ॥ kaShTapaDutirali enuvudO brahmavidhiyEnO! । ashte nammaya pADu? - Mankutimma ॥ 34 ॥

Meaning in Kannada

ಈ ಜಗದ್ಸೃಷ್ಟಿಯ ಬಗ್ಗೆ ಎಷ್ಟು ಚಿ೦ತಿಸಿದರೂ ನಿವಾರಣೆಯಾಗದ ಅನುಮಾನಗಳು, ಸಂದೇಹಗಳು ಹಾಗೆ ಉಳಿದಿವೆ. ಈ ಸೃಷ್ಟಿಯ ರಹಸ್ಯವನ್ನು ಚೇಧಿಸುವುದಕ್ಕಾಗಿ, ತತ್ವಗಳ ಹುಡುಕಿ, ತಡಕಿ ಕಷ್ಟಪದುವುದೇ ಮಾನವರಿಗೆ ಆ ಪರಮಾತ್ಮ ಬರೆದ ಹಣೆಬರಹವೋ, ಇಷ್ಟೇಯೇ ನಮ್ಮ ಪಾಡು ಎಂದು ಪ್ರಸ್ತಾಪಿಸುತ್ತಾರೆ ಮಾನ್ಯ ಗುಂಡಪ್ಪನವರು.

Meaning & Interpretation

Is it the wish of providence to let man suffer trying to find answers to his questions about the creations. The doubts always seem to multiply when he thinks more about the answers. Is this our final fate? - Mankutimma

Themes

DeathFateNature

Video Section

Video Coming Soon

Detailed video explanations by scholars and experts will be available soon.