Mankutimmana Kagga by D.V. Gundappa
ಎಲ್ಲೆಲ್ಲಿಯುಂ ಮೋಹಸಂಭ್ರಾಂತಿಗಳ ಕವಿಸಿ । ಸಲ್ಲದ ಕುಮಾರ್ಗದೊಳು ನಿನ್ನ ತಾಂ ನಡಸಿ ॥ ಗೆಲ್ಲಲಿಲ್ಲವನಾ ಪರೀಕ್ಷೆಯೊಳಗೆಂದು ವಿಧಿ । ಸೊಲ್ಲಿಪುದು ಸರಿಯೇನೋ? - ಮಂಕುತಿಮ್ಮ ॥ ೩೬ ॥
ellelliyum mOhasambhrAntigaLa kavisi । sallada kumArgadoLu ninna tAm naDasi ॥ gellalillavanA parIksheyoLagendu vidhi । sollipudu sariyEnO? - Mankutimma ॥ 36 ॥
ಇಡೀ ಜಗತ್ತೇ ಒಂದು ಭ್ರಾಂತಿಯ ಉಂಡೆ. ಮಾನವರಿಗೆ ಯಾವುದೂ ಅರ್ಥವಾಗುವುದಿಲ್ಲ ಆದರೂ ಪ್ರಯತ್ನ ಮಾಡುತ್ತಾನೆ. ಅವನಿಗೆ ಅರಿವಿನ ಮಿತಿ ಉಂಟು. ಅಮಿತವಾದ ಜಗತ್ಸೃಷ್ಟಿಯ ರಹಸ್ಯವನ್ನು ಪರಿಮಿತ ಮತಿಯಿಂದ ಅರಿಯುವುದೆಂತು? . ಈ ಜಗತ್ತನ್ನು ತನ್ನ ಅಪರಿಮಿತ ಶಕ್ತಿಯಿಂದ ಅಗಾಧವಾಗಿ ಸೃಷ್ಟಿಸಿ, ಮಾನವರನ್ನು ಅಲ್ಪಮತಿಗಳನ್ನಾಗಿಸಿ, ಅವನು ಅರಿಯುವ ಪ್ರಯತ್ನದಲ್ಲಿ ಸೋತಾಗ, ಇವನು ಗೆಲ್ಲಲಿಲ್ಲ ಎಂದು ಹೇಳುವುದು ಆ ಪರಮಾತ್ಮನಿಗೆ ಸರಿಯೇ? ಎಂದು ಪ್ರಸ್ತಾಪಿಸುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.
Is the providence fair in claiming that man did not succeed in his tests? It set up illusions all around him. It made him tread all the wrong (immoral) paths. - Mankutimma
Video Coming Soon
Detailed video explanations by scholars and experts will be available soon.