Mankutimmana Kagga by D.V. Gundappa
ಅರೆಗಣ್ಣು ನಮದೆಂದು ಕೊರಕೊರಗಿ ಫಲವೇನು? । ಅರೆಬೆಳಕು ಧರೆಯೊಳೆಂದೊರಲಿ ಸುಖವೇನು? ॥ ಇರುವ ಕಣ್ಣಿರುವ ಬೆಳಕಿನೊಳಾದನಿತ ನೋಡಿ । ಪರಿಕಿಸಿದೊಡದು ಲಾಭ - ಮಂಕುತಿಮ್ಮ ॥ ೪೭ ॥
aregaNNu namadendu korakoragi phalavEnu? । arebeLaku dhareyoLu endu orali sukhavEnu? ॥ iruva kaNNiruva beLakinoLu Adanita nODi । parikisidoDe adu lAbha - Mankutimma ॥ 47 ॥
ನಮಗೆ ತಿಳಿದಿರುವುದು ಅರೆ ಬರೆ. ಈ ಅರೆ ಬರೆ ಜ್ಞಾನವನ್ನು ಇಟ್ಟುಕೊಂಡು ನಾವು ಪೂರ್ಣ ಸತ್ಯವನ್ನು ಪಡೆಯುವುದು ಹೇಗೆ ಎಂದು ಗೋಳಾಡದೆ ಇರುವ ಅರಿವಿನಿಂದ ಸಂಪೂರ್ಣ ಜ್ಞಾನವನ್ನು ಪಡೆದುಕೊಳ್ಳಲು ಪ್ರಯತ್ನಿಸಿದರೆ ಅದು ಲಾಭಧಾಯಕವೆನ್ನುತ್ತಾರೆ ಶ್ರೀ ಗುಂಡಪ್ಪನವರು. ಈ ಜಗತ್ತಿನ ಯಾವುದೇ ಭಾಗದಲ್ಲಿ ದಿನದ ಅರ್ಧಭಾಗ ಬೆಳಕು ಇನ್ನರ್ಧಭಾಗ ಕತ್ತಲು. ಬೆಳಕಿನಲ್ಲಿ ನಾವು ನಮ್ಮ ಕೆಲಸ ಕಾರ್ಯಗಳು ಮಾಡುವಹಾಗೆ, ಇರುವ ಜ್ಞಾನವನ್ನು ಉಪಯೋಗಿಸಿದರೆ ಲಾಭ ಎನ್ನುತ್ತಾರೆ. ಮಾನ್ಯ ಗುಂಡಪ್ಪನವರು.
What is the use of lamenting that our eyes are not capable of seeing the complete truth? What is the use of bemoaning that light in this world is not sufficient? It is best if we try to see whatever is visible in whatever light is available. - Mankutimma
Video Coming Soon
Detailed video explanations by scholars and experts will be available soon.