Mankutimmana Kagga by D.V. Gundappa
ಒಂದಿಹುದುಪಾಯವೋರೊರ್ವನರೆಗಣ್ಣುಗಳು । ಮೊಂದೊಂದು ಸತ್ಯಾಂಶಕಿರಣಗಳ ಪಿಡಿದು ॥ ಒಂದುಗೂಡಿದೊಡವರ್ಗಳರಿವನೆಲ್ಲವನಾಗ । ಮುಂದು ಸಾಗುವೆವಿನಿತು - ಮಂಕುತಿಮ್ಮ ॥ ೪೮ ॥
ondihudu upAya OrOrvana aregaNNugaLu । modondu satyAmsha kiraNagaLa piDidu ॥ ondugUDidoDe avargaLu arivanellavanu Aga । mundu sAguve initu - Mankutimma ॥ 48 ॥
ಎಲ್ಲರಲ್ಲೂ ಅವರವರ ಭಾವಕ್ಕೆ ಅನುಗುಣವಾಗಿ ಅಲ್ಪ ಸ್ವಲ್ಪ ಜ್ಞಾನವಿರುತ್ತದೆ. ಜ್ಞಾನಶೂನ್ಯ ಎಂಬುವವನು ಇರಲು ಸಾಧ್ಯವೇ ಇಲ್ಲ. ಹಾಗೆ ಎಲ್ಲರಿಗೂ ಇರುವ ಅಲ್ಪಸ್ವಲ್ಪ ಜ್ಞಾನಗಳನ್ನೆಲ್ಲ, ಎಲ್ಲರ ಮನದಲ್ಲಿರುವ ಸತ್ಯವಾದ ವಿಚಾರಗಳನ್ನು ಒಂದು ಕಡೆ ಸೇರಿಸಿ ಎಲ್ಲರೂ ತಮ್ಮ ಮತವೆ ಉತ್ತಮವಾದದ್ದು ಎಂಬ ಭಾವನೆ ತೊರೆದು ಒಮ್ಮತದಿಂದ ಮುಂದೆ ಹೋದರೆ, ಎಲ್ಲರೂ ಪರಮಸತ್ಯವನ್ನರಿಯುವ ಹಾದಿಯಲ್ಲಿ ಒಂದಿಷ್ಟು ಮುಂದಕ್ಕೆ ಹೋಗಬಹುದು ಎನ್ನುವುದು ಈ ಕಗ್ಗದ ಮೂಲಕ ಮಾನ್ಯ ಗುಂಡಪ್ಪನವರ ಪ್ರಸ್ತಾಪ.
Each of us can see some thing from what ever poor vision that we have. They are different incomplete versions of the truth. But we need not be disheartened. If we can unite all the different incomplete vision (which are all truths by themselves), we may get to know the real truth. - Mankutimma
Video Coming Soon
Detailed video explanations by scholars and experts will be available soon.