Mankutimmana Kagga by D.V. Gundappa
ಪಂಡಿತರೆ ಶಾಸ್ತ್ರಿಗಳೆ ಮಿಥ್ಯೆಯಿಂ ತಥ್ಯಕ್ಕೆ । ಖಂಡಿತದಿ ಸೇತುವೆಯ ಕಟ್ಟುವೊಡೆ ನೀವು ॥ ಕಂಡಿಹಿರ ನರಹೃದಯದಾಳ ಸುಳಿ ಬಿರುಬುಗಳ? । ದಂಡವದನುಳಿದ ನುಡಿ - ಮಂಕುತಿಮ್ಮ ॥ ೪೯ ॥
panditare shAstrigaLe mithyeyim tathyakke । khanditadi sEtuveya kaTTuvoDe nIvu ॥ kandihira nara hRudayada ALa suLi birubugaLa? । danDavu adanu uLida nuDi - Mankutimma ॥ 49 ॥
ಪಾಂಡಿತ್ಯವನ್ನು ಪ್ರತಿಪಾದಿಸುವ ಪಂಡಿತರೆ ಮತ್ತು ಶಾಸ್ತ್ರವನ್ನು ಪ್ರತಿಪಾದಿಸುವ ಶಾಸ್ತ್ರಿಗಳೆ, ನಿಮ್ಮ ಪಾಂಡಿತ್ಯದಿಂದ ಮತ್ತು ಶಾಸ್ತ್ರ ಪ್ರತಿಪಾದನೆಯಿಂದ ಸುಳ್ಳನ್ನೇ ನಿಜವೆಂದು ನಿರೂಪಿಸಲು ಮತ್ತು ಇವೆರಡರ ಮಧ್ಯೆ ಒಂದು ಸೇತುವೆಯನ್ನು ಕಟ್ಟುವಾಗ ಸಾಮಾನ್ಯ ಮನುಜರ ಹೃದಯದಾಳದಲ್ಲಿ ಇರುವ ಗೊಂದಲಗಳು, ಅವರು ಅನುಭವಿಸುವ ಕಾಠಿಣ್ಯಗಳನ್ನು ಕಂಡಿದ್ದೀರಾ ಎಂದು ಕೇಳುತ್ತಾ ಸಾಮಾನ್ಯರ ಮನದ ಭಾವದ ಮುಂದೆ ಎಲ್ಲ ಪಾಂಡಿತ್ಯವೂ ಮತ್ತು ಶಾಸ್ತ್ರಗಳೂ ದಂಡವೆನ್ನುತ್ತಾರೆ (ನಿಷ್ಪ್ರಯೋಜಕ) ಮಾನ್ಯ ಗುಂಡಪ್ಪನವರು.
Let us ask these learned scholars who are determined to bridge the gap between what we can see and feel (false) to the ultimate truth - Have you people been able to measure the emotional depth, ferocity of the swirls that are found there? Any talk about the truth that ignores (does not explain) the human emotion/conscience is a waste. - Mankutimma
Video Coming Soon
Detailed video explanations by scholars and experts will be available soon.