Mankutimmana Kagga by D.V. Gundappa
ತೃಣಕೆ ಹಸಿರೆಲ್ಲಿಯದು? ಬೇರಿನದೆ? ಮಣ್ಣಿನದೆ? । ದಿನಪನದೆ? ಚಂದ್ರನದೆ? ನೀರಿನದೆ? ನಿನದೆ? ॥ ತಣಿತಣಿವ ನಿನ್ನ ಕಣ್ಣಿನ ಪುಣ್ಯವೋ? ನೋಡು । ಗುಣಕೆ ಕಾರಣವೊಂದೆ? - ಮಂಕುತಿಮ್ಮ ॥ ೫೩ ॥
tRuNake hasirellinadu? bErinade? maNNinade? । dinapanade? candranede? nIrinade? ninade? ॥ taNitaNiva ninna kaNNina puNyavO? nODu । guNake kAraNavonde? - Mankutimma ॥ 53 ॥
ಹೌದಲ್ಲವಾ? ನಮಗೂ ಇಂತಹ ಪ್ರಶ್ನೆಗಳು ಮನದಲ್ಲಿ ಉದ್ಭವವಾಗಿರಬಹುದು, ಹಲವು ಬಾರಿ. ನಾವು ನೋಡುವ ಪ್ರತಿವಸ್ತುವಿನಲ್ಲೂ ಹಲವು ಸೋಜಿಗಗಳನ್ನು ನಾವು ಕಾಣಬಹುದು. ಆದರೆ ಆ ಸೋಜಿಗಕ್ಕೆ ಒಂದು ಕಾರಣವನ್ನು ಹುಡುಕಲು ನಮ್ಮಿಂದಾಗುವುದಿಲ್ಲ. ಏಕೆಂದರೆ ಒಂದು ಕಾರಣದಿಂದ ಆದಂತ ವಸ್ತುವಾವುದೂ ಈ ಪ್ರಪಂಚದಲ್ಲಿ ಇಲ್ಲವೆಂಬುದೆ ನನ್ನ ಗಟ್ಟಿ ನಂಬಿಕೆ. ಹಾರುವ ಹಕ್ಕಿಯ ಬಣ್ಣ, ರೆಕ್ಕೆಯ ವಿನ್ಯಾಸ, ಹಾವಿನ ರೂಪ, ಅದರ ಮೈಮೇಲಿನ ಚಿತ್ತಾರಗಳು, ಅಬ್ಬಾ ಎಂತಹ ವಿಚಿತ್ರ. ಇದೊಂದೂ ನಮಗೆ ಅರ್ಥವಾಗುವುದಿಲ್ಲ. ಎಲ್ಲವೂ ವಿಸ್ಮಯ.
Where did the grass get its green color? Did it get it from its roots? or the soil? Or the Sun? or the Moon? or the water? or from you, the observer? Or is it that your eyes are fortunate to see it as pleasing green? Can there be only one source for any quality we find in objects (and people)? - Mankutimma
Video Coming Soon
Detailed video explanations by scholars and experts will be available soon.