Back to List

Kagga 530 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ನಿನ್ನ ಕಣ್ ಕಿವಿ ಮನಗಳರಿವಷ್ಟು ನಿನ್ನ ಜಗ । ನಿನ್ನನಳಿಸುವ ನಗಿಸುವೆಲ್ಲ ನಿನ್ನಂಶ ॥ ಉನ್ನತಿಗೆ ನೀನೇರಿದಂತೆ ಜಗ ವಿಸ್ತರಿಸಿ । ಸಣ್ಣತನ ಸವೆಯುವುದು - ಮಂಕುತಿಮ್ಮ ॥ ೫೩೦ ॥

ninna kaN kivi managaLu arivaShTu ninna jaga । ninnanu aLisuva nagisuvella ninna amsha ॥ unnatige nInu Eridante jaga vistarisi । saNNatana saveyuvudu - Mankutimma ॥ 530 ॥

Meaning in Kannada

ನೀನು ಕಾಣುವಷ್ಟು, ನೀನು ಕೇಳುವಷ್ಟು ಮತ್ತು ನಿನ್ನ ಮನಸ್ಸು ಎಷ್ಟನ್ನು ಊಹಿಸಬಹುದೋ ಅಷ್ಟು ನಿನ್ನ ಜಗತ್ತಾಗುತ್ತದೆ. ನಿನ್ನನ್ನು ಕಣ್ಣೀರಿಡಿಸುವ ಮತ್ತು ನಗಿಸುವ ಎಲ್ಲ ಅಂಶಗಳೂ ನಿನ್ನವೇ ಆಗಿರುತ್ತದೆ. ಅವುಗಳನ್ನು ಮೀರಿ ನೀನು ಬೆಳೆದರೆ ನಿನ್ನ ಜಗತ್ತು ವಿಶಾಲವಾಗಿ ನಿನ್ನಲ್ಲಿ ಸಣ್ಣತನ ಸವೆದು ನೀನೂ ಸಹ ಬೆಳೆಯುತ್ತೀಯೆ ಎಂದು ಉಲ್ಲೇಖ ಮಾಡಿದ್ದಾರೆ ಮಾನ್ಯ ಗುಂಡಪ್ಪನವರು ಈ ಮುಕ್ತಕದಲ್ಲಿ.

Meaning & Interpretation

Your world is all what your eyes, ears and mind can see. These are the only things that can make you cry or laugh. If you raise yourselves mentally, then your vision starts expanding. That is how you will grow and get rid of innate 'small-mindedness'. - Mankutimma

Themes

Life

Video Section

Video Coming Soon

Detailed video explanations by scholars and experts will be available soon.