Mankutimmana Kagga by D.V. Gundappa
ಸಾಧ್ಯಪಡದಾರಿಗಂ ನರಭಾಲಪಟ್ಟವನು । ಶುದ್ಧಪಡಿಸಲು ತೊಡೆದು ಪೂರ್ವದೆಲ್ಲವನು ॥ ಹೊದ್ದೆ ಹರಿಯಲಿ ಬೇಕು ಕರ್ಮಶೇಷದ ಪಟವ । ಬುದ್ಧಿನುಡಿ ಸೈರಣೆಯೆ - ಮಂಕುತಿಮ್ಮ ॥ ೬೩೩ ॥
sAdhyapaDadu Arigam nara bhAla paTTavanu । shuddhapaDisalu toDedu pUrvada ellavanu ॥ hodde hariyali bEku karmashEShada paTava । buddhi nuDi sairaNeye - Mankutimma ॥ 633 ॥
ಪೂರ್ವಕರ್ಮವನ್ನು ಸಂಪೂರ್ಣವಾಗಿ ಒಂದೇ ಬಾರಿಗೆ ಅಳಿಸಿಹಾಕಲು ಯಾರಿಗೂ ಸಾಧ್ಯವಾಗುವುದಿಲ್ಲ. ಆ ಪೂರ್ವಕರ್ಮದ ಹೊದಿಕೆಯನ್ನು ಹೊದ್ದೇ, ಎಂದರೆ ಕರ್ಮವನ್ನು ಹೊತ್ತುಕೊಂಡೇ, ಮಾಡುತ್ತಲೇ, ಸವೆಸುತ್ತಲೇ ಜೀವನವನ್ನು ಸಾಗಿಸಬೇಕು. ಆದರೆ ಹಾಗೆ ಬದುಕುವಾಗ ಸೈರಣೆಯಿಂದ, ತಾಳ್ಮೆಬಿಡದೆ, ವಿವೇಕದಿಂದ ಜೀವಿಸಬೇಕು ಎಂದು ಪೂರ್ವಕರ್ಮಾಧಾರಿತ ಬದುಕಿನ ಬವಣೆಯನ್ನು ಎದುರಿಸುವ ಪರಿಯನ್ನು ನಮಗೆ ಅರುಹಿದ್ದಾರೆ ಮಾನ್ಯ ಗುಂಡಪ್ಪನವರು ನಮಗೆ ಈ ಮುಕ್ತಕದಲ್ಲಿ.
No one is capable of closing the books of karma. They would have to wipe off all the consequences of their previous actions which is impossible. So, one has to bear the burden of the consequences of past karma. Only advice can be that of 'patience'." - Mankutimma
Video Coming Soon
Detailed video explanations by scholars and experts will be available soon.