Mankutimmana Kagga by D.V. Gundappa
ಚಿತ್ತದನುಭವ ಭಾವ ಸಂಭಾವನೆಗಳೆಲ್ಲ । ಭತ್ತವದನು ವಿಚಾರಯುಕ್ತಿಗಳು ಕುಟ್ಟೆ ॥ ತತ್ತ್ವತಂಡುಲ ದೊರೆಗುಮದು ವಿವೇಚಿತತತ್ತ್ವ । ನಿತ್ಯ ಭೋಜನ ನಮಗೆ - ಮಂಕುತಿಮ್ಮ ॥ ೬೪ ॥
chittada anubhava bhAva sambhAvanegaLella । bhattu avadanu vichArayukthigaLu kuTTe ॥ tattva tunDala doregum adu vivEchita tattva । nitya bhOjana namage - Mankutimma ॥ 64 ॥
ನಮ್ಮ ಮನಸ್ಸಿನಲ್ಲಿ ಬರುವ ಭಾವ, ಅನುಭವ ಮತ್ತು ಆಲೋಚನೆಗಳೆಲ್ಲ ಬತ್ತದಂತೆ. ಅದನ್ನು ಯುಕ್ತಿ ಮತ್ತು ವಿಚಾರವೆಂಬ ಒನಕೆಗಳಿಂದ ಕುಟ್ಟಿದರೆ ತತ್ವವೆಂಬ ಅಕ್ಕಿ ನಮಗೆ ದೊರೆಯುವುದು. ಹಾಗೆ ದೊರೆತ ಅಕ್ಕಿರೂಪದ ತತ್ವವೇ ನಮ್ಮ ಭೌದ್ಧಿಕತೆಗೆ ಆಹಾರ ಎಂಬುದೇ ಈ ಕಗ್ಗದ ತಾತ್ಪರ್ಯ. ನಮ್ಮ ಮಾನಸಿಕತೆಯಲ್ಲಿ ನಮ್ಮ ವಿಚಾರ ಮಂಥನಕ್ಕೆ ಒತ್ತು ಕೊಟ್ಟಿದ್ದಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ .
Our experiences, feelings and merits are like paddy (with husk). One must beat with examination and arguments. Only then one will get conviction on his own philosophy. Only such a theory can be called as well-thought one. That will be the food for thought every day. - Mankutimma
Video Coming Soon
Detailed video explanations by scholars and experts will be available soon.