Mankutimmana Kagga by D.V. Gundappa
ಪುಸ್ತಕದಿ ದೊರೆತರಿವು ಮಸ್ತಕದಿ ತಳೆದ ಮಣಿ । ಚಿತ್ತದೊಳು ಬೆಳೆದರಿವು ತರು ತಳೆದ ಪುಷ್ಪ ॥ ವಸ್ತು ಸಾಕ್ಷಾತ್ಕಾರವಂತರೀಕ್ಷಣೆಯಿಂದ । ಶಾಸ್ತ್ರಿತನದಿಂದಲ್ಲ - ಮಂಕುತಿಮ್ಮ ॥ ೬೫ ॥
pustakadi doretarivu mastakadi taLeda maNi । chittadoLu beLedarivu taru taLeda pushpa ॥ vastu sAkshAtkAravu antarIkShaNEyinda । shAstritanadindalla - Mankutimma ॥ 65 ॥
ಪುಸ್ತಕಗಳನ್ನು ಓದಿ ಪಡೆದುಕೊಂಡ ಪಾಂಡಿತ್ಯ ತಲೆಯಮೇಲೆ ತಂದಿಟ್ಟುಕೊಂಡಂತ ಕಿರೀತದಲ್ಲಿನ ಮಣಿಯಂತೆ. ಆದರೆ ನಮ್ಮ ಅನುಭವಗಳನ್ನು ವಿಚಾರದ ಒರೆಗೆ ಹಚ್ಚಿ ನಮ್ಮ ಚಿತ್ತದಲ್ಲಿ ನಮಗೆ ಸ್ಫುರಿಸಿದ ಜ್ಞಾನ, ತನ್ನ ಸ್ವಾಭಾವಿಕ ಗುಣಕ್ಕೆ, ಮಣ್ಣಿನ ಸಾರ, ಪರಿಸರದ ಪ್ರಭಾವದಿಂದ ತನ್ನೊಳಗಿಂದಲೇ ವಿಕಸಿತವಾಗುವ ಒಂದು ಗಿಡದ ” ಪುಷ್ಪದಂತೆ” ಎನ್ನುತಾರೆ, ಮಾನ್ಯ ಗುಂಡಪ್ಪನವರು.
Knowledge obtained from reading books is like an ornament on top of the head. It's only external. Knowledge that grows from contemplation, is like a flower on a tree. The realization of the truth can only be attained by looking inwards. Not just by being called "well-educated". - Mankutimma
Video Coming Soon
Detailed video explanations by scholars and experts will be available soon.