Mankutimmana Kagga by D.V. Gundappa
ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ । ಗದ್ದಲವ ತುಂಬಿ ಪ್ರಸಿದ್ಧನಾಗುತಿಹೆ ॥ ಉದ್ಧರಿಸುವೆನು ಜಗವನೆನ್ನುತಿಹ ಸಖನೆ, ನಿ- । ನ್ನುದ್ಧಾರವೆಷ್ಟಾಯ್ತೊ? - ಮಂಕುತಿಮ್ಮ ॥ ೬೫೮ ॥
eddeddu bILutihe, guddADi sOlutihe । gaddalava tumbi prasiddhanAgitihe ॥ uddharisuvenu jagavanu ennutiha sakhane, । ninnuddhAravu eShTAyto? - Mankutimma ॥ 658 ॥
ಬಡಗಿ, ರೈತ, ಕಮ್ಮಾರ, ಕುಂಬಾರ ಮುಂತಾದ ಕುಶಲ ಕರ್ಮಿಗಳೆಲ್ಲ ‘ಯೋಗ’ವನ್ನು ಕಲಿತವರೇನು? ಅವರ ಜೀವನವೆಲ್ಲ ಮೈಬಗ್ಗಿಸಿ ಮಾಡುವ ದುಡಿತಕ್ಕೆ ಮೀಸಲಾಗಿರುತ್ತದೆ. ಬಿಡುವಿಲ್ಲದ ಕೆಲಸಕಾರ್ಯಗಳ ಮಧ್ಯೆ ಅವರಿಗೆ ವ್ಯರ್ಥ ಹರಟೆಗೆ ಸಮಯವಿರುವುದಿಲ್ಲ. ಅವರು ಸದಾ ದುಡಿದು ತಿನ್ನುವವರಾದ್ದರಿಂದ, ಅವರಿಗೆ ಯಾರ ಹಂಗೂ ಇರುವುದಿಲ್ಲ. ಅಂತಹವರಿಗೆ ಬಾಳು ದುರ್ಗಮವೆನಿಸುವುದಿಲ್ಲ ಎಂದು ‘ಕಾಯಕ’ ದ ಮಹತ್ವವನ್ನು ಬಹಳ ಸುಂದರವಾಗಿ ಹೇಳಿದ್ದಾರೆ ಮಾನ್ಯ ಗುಂಡಪ್ಪನವರು ನಮಗೆ ಈ ಮುಕ್ತಕದಲ್ಲಿ.
You will rise and fall. You will fight and lose. You will create lot of noise to get fame. You claim to uplift the entire world. Oh friend! have you seen how much of uplift have you done to yourself (your soul) in the process?" - Mankutimma
Video Coming Soon
Detailed video explanations by scholars and experts will be available soon.