Back to List

Kagga 668 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ಬಡಗಿ ಬೇಸಾಯಿ ಕರ್ಮಿಗರೇನು ಯೋಗಿಗಳೊ! । ಮುಡಿಪವರ ಮನಸೆಲ್ಲ ಕೈಯ ದುಡಿತಕ್ಕೆ ॥ ಬಿಡುವಿರದು ಬಣಗು ಚಿಂತೆಗೆ, ಬುತ್ತಿ ಹಂಗಿರದು । ಕಡಿದಲ್ಲವರ್ಗೆ ಬಾಳ್ - ಮಂಕುತಿಮ್ಮ ॥ ೬೬೮ ॥

baDagi bEsAyi karmigarEnu yOgigaLo! । muDipavara manasella kaiya duDitakke ॥ biDuviradu baNagu chintege, butti hangiradu । kaDidallavarge bAL - Mankutimma ॥ 668 ॥

Meaning in Kannada

ಬಡಗಿ, ರೈತ, ಕಮ್ಮಾರ, ಕುಂಬಾರ ಮುಂತಾದ ಕುಶಲ ಕರ್ಮಿಗಳೆಲ್ಲ ‘ಯೋಗ’ವನ್ನು ಕಲಿತವರೇನು? ಅವರ ಜೀವನವೆಲ್ಲ ಮೈಬಗ್ಗಿಸಿ ಮಾಡುವ ದುಡಿತಕ್ಕೆ ಮೀಸಲಾಗಿರುತ್ತದೆ. ಬಿಡುವಿಲ್ಲದ ಕೆಲಸಕಾರ್ಯಗಳ ಮಧ್ಯೆ ಅವರಿಗೆ ವ್ಯರ್ಥ ಹರಟೆಗೆ ಸಮಯವಿರುವುದಿಲ್ಲ. ಅವರು ಸದಾ ದುಡಿದು ತಿನ್ನುವವರಾದ್ದರಿಂದ, ಅವರಿಗೆ ಯಾರ ಹಂಗೂ ಇರುವುದಿಲ್ಲ. ಅಂತಹವರಿಗೆ ಬಾಳು ದುರ್ಗಮವೆನಿಸುವುದಿಲ್ಲ ಎಂದು ‘ಕಾಯಕ’ ದ ಮಹತ್ವವನ್ನು ಬಹಳ ಸುಂದರವಾಗಿ ಹೇಳಿದ್ದಾರೆ ಮಾನ್ಯ ಗುಂಡಪ್ಪನವರು ನಮಗೆ ಈ ಮುಕ್ತಕದಲ್ಲಿ.

Meaning & Interpretation

The carpenters, the farmers and other hard workers are fortunate and saints in their own way. All their mental energy is focused on the work at hand. They do not have any spare time for gossip, jealousy and other worries. They get returns for their work and don't have to depend on others for food. Life is not seem 'tough' for them." - Mankutimma

Themes

LifeDeathSocietyDuty

Video Section

Video Coming Soon

Detailed video explanations by scholars and experts will be available soon.