Mankutimmana Kagga by D.V. Gundappa
ಸ್ರಷ್ಟುಸಂಕಲ್ಪಲಿಪಿಯೆಲ್ಲ ನಮ್ಮೆದುರಿಲ್ಲ । ದೃಷ್ಟಿಗೋಚರವದರೊಳೊಂದು ಗೆರೆ ಮಾತ್ರ ॥ ಅಷ್ಟರಿಂದಿದು ನಷ್ಟವದು ಶಿಷ್ಟವೆನ್ನುವುದೆ? । ಕ್ಲಿಷ್ಟದ ಸಮಸ್ಯೆಯದು - ಮಂಕುತಿಮ್ಮ ॥ ೬೭ ॥
sraShTu sankalpa lipiyella nammeduru illa । dRuShTi gOcharavadaroLondu gere mAtra ॥ aShTarinda idu naShTavu adu shiShTavu ennuvude? । kliShTada samasyeyadu - Mankutimma ॥ 67 ॥
“ಜಗತ್ತು ಸೃಷ್ಟಿಯಾಗುವ ಮುಂಚಿನ ಲೇಖಾ ಅಥವಾ ರೇಖಾ ಚಿತ್ರ ನಮ್ಮ ಬಳಿ ಇಲ್ಲ. ನಾವು ಕಾಣಲಾಗಿರುವುದು ಒಂದು ಬೃಹತ್ ಚಿತ್ರದಲ್ಲಿ ಒಂದೇ ಗೆರೆ ಮಾತ್ರ. ಅಷ್ಟು ಸಣ್ಣ ಗೆರೆಯನ್ನು ಕಂಡು ನಾವು ಈ ಸೃಷ್ಟಿಯನ್ನು ಕುರಿತು ವ್ಯಾಖ್ಯಾನ ಮಾಡುತ್ತಾ, ಇದು ಸರಿ ಇದು ಸಪ್ಪು ಎನ್ನುವುದು ಸರಿಯೇ?” ಎಂದು ಕೇಳುತ್ತ, ಇದು ಬಹಳ ಕ್ಲಿಷ್ಟದ ಸಮಸ್ಯೆ ಎಂದು ಪ್ರಸ್ತಾಪಿಸುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲಿ.
We do not have the entire blueprint/script of this creation in front of us. All we see could well be just a line of the entire blueprint. Just by that little information, how can we say one thing is bad and other is good? This is a tough confusing world. - Mankutimma
Video Coming Soon
Detailed video explanations by scholars and experts will be available soon.