Back to List

Kagga 677 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ಎಷ್ಟು ನೀನುಂಡರೇಂ? ಪುಷ್ಟಿ ಮೈಗಾಗುವುದು । ಹೊಟ್ಟೆ ಜೀರ್ಣಿಸುವಷ್ಟೆ; ಮಿಕ್ಕುದೆಲ್ಲ ಕಸ ॥ ಎಷ್ಟು ಗಳಿಸಿಟ್ಟೊಡಂ ನಿನಗೆ ದಕ್ಕುವುದೆಷ್ಟು? । ಮುಷ್ಟಿ ಪಿಷ್ಟವು ತಾನೆ? - ಮಂಕುತಿಮ್ಮ ॥ ೬೭೭ ॥

eShTu nInu unDarEm? puShTi maigAguvudu । hoTTe jIrNisuvaShTe; mikkudella kasa ॥ eShTu gaLisiTToDaM ninage dakkuvudeShTu? । muShTi piShTavu tAne? - Mankutimma ॥ 677 ॥

Meaning in Kannada

ನೀನು ಎಷ್ಟು ಆಹಾರವನ್ನು ತಿಂದರೂ, ಅದರಿಂದ ದೇಹಕ್ಕೆ ಪುಷ್ಟಿಸಿಗುವುದು, ನಿನ್ನ ದೇಹ ಜೀರ್ಣಿಸಿಕೊಳ್ಳುವಷ್ಟು ಮಾತ್ರ. ಅಧಿಕವಾಗಿ ತಿಂದದ್ದೆಲ್ಲ ಜೀರ್ಣವಾಗದೆ, ಮಲರೂಪದಲ್ಲಿ ಕಸವಾಗಿ ಹೊರಬರುತ್ತದೆ. ಎಷ್ಟು ಸಂಪತ್ತನ್ನು ಗಳಿಸಿದರೂ ಹಸಿವಾದಾಗ ನೀನು ಸೇವಿಸಲಾಗುವುದು ಕೇವಲ ಒಂದು ಮುಷ್ಠಿ ಅನ್ನ ತಾನೆ? ಎಂದು ಕೇಳುತ್ತಾ ನಮ್ಮ ಮಿತಿಗಳನ್ನು ಅರ್ಥ ಮಾಡಿಕೊಳ್ಳುವಂತೆ ನಮಗೆ ಸೂಚನೆಯನ್ನಿತ್ತಿದ್ದಾರೆ ಮಾನ್ಯ ಗುಂಡಪ್ಪನವರು ಈ ಮುಕ್ತಕದಲ್ಲಿ.

Meaning & Interpretation

Does it matter how much you eat? The body can assimilate only that much that the stomach can digest. Rest all is waste. Similarly, it does not matter how much wealth you accumulate. You can only use (and need) only handful of flour." - Mankutimma

Themes

Peace

Video Section

Video Coming Soon

Detailed video explanations by scholars and experts will be available soon.