Back to List

Kagga 68 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ಎಲ್ಲ ಅರೆಬೆಳಕು ಅರೆಸುಳಿವು ಅರೆತಿಳಿವಿಲ್ಲಿ । ಎಲ್ಲಿ ಪರಿಪೂರಣವೊ ಅದನರಿಯುವನಕ ॥ ಸೊಲ್ಲಿಸುವರಾರು ಸೃಷ್ಟಿಯ ಪೇಟಿಯೊಳಗುಟ್ಟ? । ಎಲ್ಲ ಬಾಳು ರಹಸ್ಯ - ಮಂಕುತಿಮ್ಮ ॥ ೬೮ ॥

ella arebeLaku aresuLivu aretiLivilli । elli paripUraNavo adanariyuva tanaka ॥ sollisuvarAru sRuShTiya pETiyoLaguTTa । ella bALu rahasya - Mankutimma ॥ 68 ॥

Meaning in Kannada

ಎಲ್ಲ ವಿಷಯಗಳಲ್ಲೂ ಅರೆ ಬರೆ ಜ್ಞಾನ ಮತ್ತು ತಿಳುವಳಿಕೆ. ಆ ತಿಳುವಳಿಕೆಯನ್ನು ಪಡೆವ ಮಾರ್ಗಗಳೂ ಸಹ ಅರ್ದಂಬರ್ದ ಮತ್ತು ಯಾವುದೂ ನಿಚ್ಚಳವಲ್ಲ. ಅದು ನಮಗೆ ಸಂಪೂರ್ಣ ಜ್ಞಾನ ಬರುವ ತನಕ ಹಾಗೇ ಇರುತ್ತದೆ. ಆದರೆ ನಮಗೆ ಆ ಪರಿಪೂರ್ಣಜ್ಞಾನವನ್ನು ಹೇಳಿಕೊಡುವವರಾರು. ಈ ಜೀವನವೆಲ್ಲ ಒಂದು ನಿಗೂಢ ಅಥವಾ ರಹಸ್ಯ ಎನ್ನುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

Meaning & Interpretation

It's all half lighted here, half clues, half knowledge. No one knows where is the complete truth. Untill we know that, who is going to teach us about the mystery of this creation (kept hidden in the box)? All life is a mystery. - Mankutimma

Themes

WisdomLifeNature

Video Section

Video Coming Soon

Detailed video explanations by scholars and experts will be available soon.